ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ದುಃಖ ವ್ಯಕ್ತಪಡಿಸಿದ್ದಾರೆ.

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ ಎಂದು ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ, ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ ಎಂದಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಸಿಎಂ ಪ್ರಾರ್ಥಿಸಿದ್ದಾರೆ.

Related posts