ಹಣಕ್ಕಾಗಿ ಉದ್ಯಮಿಗೆ ಬೆದರಿಕೆ ಆರೋಪ; ಕೇಂದ್ರ ಸಚಿವ ಹೆಚ್ಡಿಕೆ ವಿರುದ್ದ ಎಫ್‌ಐ.ಆರ್

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಎಫ್​ಐಆರ್ ದಾಖಲಾಗಿದೆ.

50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಉದ್ಯಮಿ ವಿಜಯ್ ಟಾಟಾ ದೂರು ನೀಡಿದ್ದರು.‌ ಈ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಅಮೃತಹಳ್ಳಿ ಠಾಣೆ ಪೊಲೀಸರು ಎಫ್‌ಐ‌ಆರ್ ದಾಖಲಿಸಿದ್ದಾರೆ.

ಹೆಚ್.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ಶಾಸಕ ರಮೇಶ್ ಗೌಡ ವಿರುದ್ಧ ಪ್ರಕರಣ ದಾಖಲಾಗಿದೆ.‌

Related posts