ಹೆಚ್ಡಿಕೆ ವಿರುದ್ದ ಎಫ್‌ಐ‌ಆರ್; ನಿಷ್ಪಕ್ಷಪಾತ ತನಿಖೆ ಬಗ್ಗೆ ಕಮೀಷನರ್ ಭರವಸೆ

ಬೆಂಗಳೂರು: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ದ ದಾಖಲಾಗಿರುವ ಪ್ರಕರಣ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ನಡೆಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಉದ್ಯಮಿ ವಿಜಯ್ ಟಾಟಾ ಎಂಬವರು ನೀಡಿದ್ದ ದೂರಿನ ಮೇರೆಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಈ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ನಡೆಸಲಾಗುವುದು ಎಂದಿದ್ದಾರೆ.​

Related posts