ಬೆಂಗಳೂರು: ಮುಡಾ ಹಗರಣ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ನಿತ್ಯ ಒಂದಿಲ್ಲೊಂದು ಸಂಕಟ ಎದುರಾಗುತ್ತಲೇ ಇದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ.
ಅರ್ಕಾವತಿ ಬಡಾವಣೆ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿವೇಶನದಾರರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ನಿವೇಶನದ ಮಾಲೀಕರಾದ ಎಂ.ಎಸ್.ಶಿವಲಿಂಗಪ್ಪ, ಎಂ.ಚಂದ್ರಶೇಖರನ್, ಕೆ.ರಾಮಚಂದ್ರಯ್ಯ ಮತ್ತು ಡಾ.ವೆಂಕಟಕೃಷ್ಣಪ್ಪ ಅವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಡಿಎ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.