ಕನ್ನಡಿಗರ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಉದ್ದೇಶದಿಂದ ಜೆಡಿಎಸ್ ಪಕ್ಷವು ಬಿಜೆಪಿ ಜೊತೆ ಹೊಂದಾಣಿಕೆ; ಹೆಚ್ಡಿಕೆ

ಬೆಂಗಳೂರು: ಕನ್ನಡಿಗರ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಉದ್ದೇಶದಿಂದ ಜೆಡಿಎಸ್ ಪಕ್ಷವು ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಉಪಚುನಾವಣಾ ಅಖಾಡದಲ್ಲಿ NDA ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿ ಎರಡನೇ ಬಾರಿಗೆ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿವೆ. ವೈಯಕ್ತಿಕ ಸಂಬಂಧ ಬೆಳೆಸುವುದಕ್ಕೆ ಮೈತ್ರಿ ಮಾಡಿಕೊಂಡಿಲ್ಲ. ಬದಲಿಗೆ ಕನ್ನಡಿಗರ ಸಮಸ್ಯೆಗಳಿಗೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ನಾವು ಒಂದಾಗಿದ್ದು, ಭವಿಷ್ಯದಲ್ಲೂ ಉಭಯ ಪಕ್ಷಗಳ ಮೈತ್ರಿ ಮುಂದುವರಿಯಲಿದೆ ಎಂದರು.

Related posts