ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಜೈದ್ ಖಾನ್ ಅಭಿನಯದ ಸಿನಿಮಾದ ಶೂಟಿಂಗ್ ವಿಚಾರ ಇದೀಗ ಗೊಂದಲದ ಗೂಡಾಗಿ ಪರಿಣಮಿಸಿದೆ. ಜೈದ್ ಖಾನ್ ಅಭಿನಯದ ಸಿನಿಮಾ ಶೂಟಿಂಗ್ ತಂಡದ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಜೈದ್ ಖಾನ್ ಅಭಿನಯದ ‘ಕಲ್ಟ್’ ಚಿತ್ರ ತಂಡದವರು ಮಾಡಿದ ತಪ್ಪಿಗೆ ಡ್ರೋನ್ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಈ ಸಂಬಂಧ ಇದೀಗ ನಟ ಜೈದ್ ಖಾನ್ ಸೇರಿದಂತೆ ಚಿತ್ರತಂಡದ ವಿರುದ್ಧ ದೂರು ದಾಖಲಾಗಿದೆ.
‘ಕಲ್ಟ್’ ಸಿನಿಮಾದಲ್ಲಿ ಡ್ರೋನ್ ಉಸ್ತುವಾರಿ ವಹಿಸಿಕೊಂಡಿದ್ದ ಡ್ರೋನ್ ಟೆಕ್ನಿಷಿಯನ್ ಸಂತೋಷ್ ಎಂಬವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪ್ರಕರಣ ನಂತರ ಇಡೀ ಚಿತ್ರ ತಂಡ ವಿವಾದದಲ್ಲಿ ಸಿಲುಕಿದೆ.