ಪ್ರಯಾಗರಾಜ್​ ಮಹಾಕುಂಭಮೇಳ ಕಾಲ್ತುಳಿತ ಪ್ರಕರಣ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್​ ಮಹಾಕುಂಭಮೇಳದಲ್ಲಿ ಸಂಭವಿಸಿರುವ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಉತ್ತರ ಪ್ರದೇಶ ಸರ್ಕಾರ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದೆ. ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.

ಕಾಲ್ತುಳಿತಪ್ರಕರಣಕ್ಕೆ ಸಂಬಂಧಿಸಿದಂತೆ 30 ಭಕ್ತರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ಹೇಳಿದೆ. ಈ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಈ ದುರಂತ ಬಗ್ಗೆ ತನಿಖೆಗಾಗಿ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಜನವರಿ 30ರಂದು ಮಹಾ ಕುಂಭ ಮೇಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಿಎಂ ಆದಿತ್ಯನಾಥ್ ತಿಳಿಸಿದ್ದಾರೆ.

Related posts