ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆಗಳಲ್ಲಿಕನ್ನಡ ಧ್ವಜಾರೋಹಣ ಕಡ್ಡಾಯ

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆಗಳಲ್ಲಿ ಮುಂದಿನ ದಿನಗಳಲ್ಲಿ ಕನ್ನಡ ಧ್ವಜಾರೋಹಣ ಮಾಡುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಅಥವಾ ಪಾಲಿಕೆ ವತಿಯಿಂದ ಎಲ್ಲಾ ಸಂಸ್ಥೆಗಳಿಗೂ ಕನ್ನಡ ಬಾವುಟ ಪೂರೈಸುವ ಕೆಲಸ ಮಾಡುತ್ತೇವೆ ಎಂದವರು ಹೇಳಿದ್ದಾರೆ.

ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕನ್ನಡರಾಜ್ಯೋತ್ಸವದ ದಿನದಂದು ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವಂತೆ ಸೂಚಿಸಲಾಗುವುದು ಎಂದವರು ತಿಳಿಸಿದ್ದಾರೆ.

Related posts