ಬೆಂಗಳೂರು: ನಿರ್ಭಯಾ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಅಪರಾಧಿಗಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿರುವ ಕ್ರಮವನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಸ್ವಾಗತಿಸಿದ್ದಾರೆ. ನಿರ್ಭಯಾ ಪ್ರಕರಣದಲ್ಲಿ ಕಾಮುಕರಿಗೆ ಗಲ್ಲು ಶಿಕ್ಷೆಯಾಗಿರುವುದು ಸಮಾಜದಲ್ಲಿನ ವಿಕೃತ ಮನಸಿನ ಕಾಮುಕರಿಗೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಮರಣ ದಂಡನೆಯ ಶಿಕ್ಷೆ ಬಗ್ಗೆ ಮಾಧ್ಯಮ ಹೇಳಿಕೆ ಮೂಲಕ ಅಭಿಪ್ರಾಯ ಹಂಚಿಕೊಂಡಿರುವ ಪ್ರಮೀಳಾ ನಾಯ್ಡು, ನಿರ್ಭಯಾ ಪ್ರಕರಣದಲ್ಲಿ ನೀಡಲಾಗಿರುವ ತೀರ್ಪು ಹಾಗೂ ಆ ತೀರ್ಪಿನಂತೆ ಅಪರಾಧಿಗಳನ್ನು ಗಲ್ಲಿಗೇರಿಸಿರುವುದು ಸ್ವಾಗತಾರ್ಹ. ಈ ತೀರ್ಪು ಜಾರಿಯಿಂದ ನಮ್ಮ ನ್ಯಾಯಾಂಗದ ಮೇಲೆ ಜನರಿಗೆ ವಿಶ್ವಾಸ ಹೆಚ್ಚಾಗಿದೆ ಎಂದು ಬಣ್ಣಿಸಿದ್ದಾರೆ.
ನಮ್ಮ ದೇಶದ ಕಾನೂನು ಬಲಿಷ್ಠವಾಗಿದೆ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ ಎಂದಿರುವ ಅವರು, ಮಹಿಳೆಯರು ಧೈರ್ಯವಾಗಿ ಪರಿಸ್ಥಿತಿಯನ್ನು ಎದುರಿಸಬೇಕು ಹಾಗೂ ಮಹಿಳಾ ಆಯೋಗವೂ ಕೂಡಾ ಸದಾ ಕಾಲ ಮಹಿಳೆಯರ ರಕ್ಷಣೆಗೆ ಬದ್ಧವಾಗಿದೆ ಎಂದು ಹೇಳಿದ್ದಾರೆ.