ಉಪಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

ಚಿತ್ರದುರ್ಗ: ವಿಧಾನ ಸಭೆಯ ಉಪಸಭಾಪತಿ ಹಾಗೂ ಹಾವೇರಿ ಕಾಂಗ್ರೆಸ್ ಶಾಸಕ ರುದ್ರಪ್ಪ ಲಮಾಣಿ ಅವರು ಅಪಘಾತದಲ್ಲಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಂಡು ತಮ್ಮ ಕ್ಷೇತ್ರಕ್ಕೆ ಕಾರಿನಲ್ಲಿ ತೆರಳಿದ್ದ ಅವರು ಮಾರ್ಗಮಧ್ಯೆ ಅಪಘಾತಕ್ಕೀಡಾಗಿದ್ದಾರೆ. ಶುಕ್ರವಾರ ಬೆಂಗಳೂರಿಂದ ಹಾವೇರಿಗೆ ತೆರಳುತ್ತಿದ್ದ ವೇಳೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮೂತ್ರ ವಿಸರ್ಜನೆಗಾಗಿ ಕಾರಿನಿಂದ ಅವರು ಇಳಿದಿದ್ದರು. ಆ ವೇಳೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರುದ್ರಪ್ಪ ಲಮಾಣಿ ಅವರು ನೆಲಕ್ಕೆ ಬಿದ್ದಿದ್ದು, ಅವರ ಹಣೆ, ಹಲ್ಲು ಮತ್ತು ಮೊಣಕಾಲಿಗೆ ಬಲವಾದ ಏಟು ತಗುಲಿದೆ. ತಕ್ಷಣಕ್ಕೆ ಹಿರಿಯೂರಿನಲ್ಲಿ ಚಿಕಿತ್ಸೆ ನೀಡಿ ಅವರನ್ನು ದಾವಣಗೆರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.

Related posts