‘ಮತೀಯವಾಗಿ ಮೀಸಲಾತಿಯನ್ನು ಅಂಬೇಡ್ಕರ್ ಅವರೇ ವಿರೋಧಿಸಿದ್ದರು, ಸುಪ್ರೀಂ ಕೋರ್ಟ್ ಕೂಡಾ ಆಕ್ಷೇಪಿಸಿತ್ತು’

ಬೆಂಗಳೂರು: ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದಕ್ಕೆ ಬಿಜೆಪಿಯ ವಿರೋಧವಿದೆ ಎಂದು ವಿಧಾನಪರಿಷತ್ತಿನಲ್ಲಿ ಶಾಸಕ ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ.

ಧರ್ಮದ ಆಧಾರದಲ್ಲಿ‌ ಮೀಸಲಾತಿ ನೀಡುವುದನ್ನು ಸಾಂವಿಧಾನಿಕವಾಗಿ ತಿರಸ್ಕರಿಸಲಾಗಿದೆ, ದೇಶದ ಸರ್ವೋಚ್ಛ ನ್ಯಾಯಾಲಯ ಕೂಡಾ ಮೀಸಲಾತಿ ನೀಡುವುದನ್ನು ವಿರೋಧಿಸಿದೆ ಎಂದು ಅವರು ರಾಜ್ಯ ಸರ್ಕಾರದ ಗಮನಸೆಳೆದಿದ್ದಾರೆ.

ಮತೀಯವಾಗಿ ಮೀಸಲಾತಿ ನೀಡುವುದಕ್ಕೆ ನನ್ನ ಸ್ಪಷ್ಟ ವಿರೋಧವಿದೆ ಎಂದು ಸ್ವತಃ ಅಂಬೇಡ್ಕರ್ ಅವರೇ ಪ್ರತಿಪಾದಿಸಿದ್ದರು.‌ ಆದರೆ ಕಾಂಗ್ರೆಸ್ ಸರ್ಕಾರ ಇಂದು ಮುಸ್ಲಿಮರಿಗೆ ಮೀಸಲಾತಿ ನೀಡುವ ಮೂಲಕ ಸಂವಿಧಾನ, ಅಂಬೇಡ್ಕರ್ ಅವರಿಗೆ ಅವಮಾನಿಸುತ್ತಿದೆ ಎಂದು ಸಿ.ಟಿ.ರವಿ ಅವರು ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Related posts