ಮಂಜೇಶ್ವರ ಅನಂತೇಶ್ವರ ದೇವಸ್ಥಾನ 221 ನೇ ವರ್ಷದ ಪುನರ್ ಪ್ರತಿಷ್ಠಾ ವರ್ದ೦ತಿ

ಚಿತ್ರ : ಮಂಜು ನೀರೇಶ್ವಾಲ್ಯ

ಮಂಜೇಶ್ವರ: ಕರಾವಳಿಯ ಪುರಾಣ ಪ್ರಸಿದ್ಧ ದೇವಾಲಯಗಳಲ್ಲೊಂದಾಗಿರುವ ಮಂಜೇಶ್ವರದ ಶ್ರೀಮದ್ ಅನಂತೇಶ್ವರ ದೇವಸ್ಥಾನ ವಿಶೇಷ ಮಹೋತ್ಸವಕ್ಕೆ ಸಾಕ್ಷಿಯಾಗಿದೆ. ಈ ದೇವಾಲಯದ 221 ನೇ ವರ್ಷದ ಪುನರ್ ಪ್ರತಿಷ್ಠಾ ವರ್ದ೦ ತಿ ಹಾಗೂ ಬೆಳ್ಳಿ ಲಾಲ್ಕಿ ಯ 150 ನೇ ವರ್ಷದ ಸಂಭ್ರಮೋತ್ಸವ ಐತಿಹಾಸಿಕವಾಗಿ ಅಪೂರ್ವ ವಿಜೃಂಭಣೆಯಿಂದ ನೆರವೇರಿದೆ.

ಸೋಮವಾರ ಬೆಳಿಗ್ಗೆ ಬೆಳ್ಳಿ ಪಲ್ಲಕಿ ಹಗಲೋತ್ಸವ , ಮಧ್ಯಾಹ್ನ ಸಮಾಜ ಭಾಂದವರಿಂದ ಶ್ರೀ ನರಸಿಂಹ ಸ್ತುತಿ ಪಠಣ ದೊಂದಿಗೆ ಪ್ರದಕ್ಷಿಣಾ ಸೇವೆ ನಡೆಯಿತು. ಸಮೃದ್ಧವಾದ ನಿರೀಕ್ಷಣಾ ವಸ್ತುಗಳು ಶ್ರೀ ದೇವರಿಗೆ ವಾದ್ಯ ಘೋಷ್ಠಿಯೊಂದಿಗೆ ಸಮರ್ಪಣೆ ಮಡಿದ ಸನ್ನಿವೇಶವೂ ಭಕ್ತ ಸಮೂಹದ ಗಮನಕೇಂದ್ರೀಕರಿಸಿತು.

ರಾತ್ರಿ 150 ನೇ ವರ್ಷದ ಬೆಳ್ಳಿ ಲಾಲಕಿಗೆ ಅಪೂರ್ವ ಅಲಂಕಾರದೊಂದಿಗೆ ಉತ್ಸವ ಹಾಗೂ ಪೂಜಾ ಸೇವೆ, ಉತ್ಸವದಲ್ಲಿ ಅದ್ಧುರಿ ವಾದ್ಯಘೋಷ್ಠಿ, ಕಣ್ಮನ ಸಂತೈಸುವ ವಿಶೇಷ ದೀಪಾರಾಧನೆ ನೆರವೇರಿತು.

Related posts