ಭೂಮಿಗೆ ಭೂಮಿಗೆ ಯಶಸ್ವಿಯಾಗಿ ಸುನೀತಾ ವಿಲಿಯಮ್ಸ್..

ಕೇಪ್ ಕೆನವೆರಲ್: ಬಾಹ್ಯಾಕಾಶದಲ್ಲಿ ಸಿಲುಕಿದ್ದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಮಂಗಳವಾರ ಭೂಮಿಗೆ ಯಶಸ್ವಿಯಾಗಿ ತಲುಪಿದ್ದಾರೆ. ಬಾಹ್ಯಾಕಾಶದಿಂದ ಸುಮಾರು 9 ತಿಂಗಳ ನಂತರ ಭಾರತೀಯ ಕಾಲಮಾನ ಬುಧವಾರ ಸುರಕ್ಷಿತವಾಗಿ ವಾಪಸ್ಸಾಗಿದ್ದು ಕೋಟ್ಯಂತರ ಭಾರತೀಯರು ಸೇರಿದಂತೆ ಜಗತ್ತಿನಾದ್ಯಂತ ಜನರಿ ನಿಟ್ಟುಸಿರು ಬಿಟ್ಟಿದ್ದಾರೆ.

ಕಳೆದ ವರ್ಷ ಜೂನ್‌ನಲ್ಲಿ ನಾಸಾ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬಾಹ್ಯಾಕಾಶಕ್ಕೆ ಪಯಣಿಸಿದ್ದರು. ಅವರಿದ್ದ ಬೋಯಿಂಗ್ ಸ್ಟಾರ್‌ಲೈನರ್ ನೌಕೆಯಲ್ಲಿ ದೋಷ ಕಂಡುಬಂದಿತ್ತು. ಇದರಿಂದಾಗಿ ಸುನೀತಾ ಮತ್ತವರ ಸಹ ಗಗನಯಾತ್ರಿಗಳು ನೌಕೆಯ ಮೂಲಕ ಹಿಂತಿರುಗುವುದು ಅಪಾಯ ಎಂದು ನಾಸಾ ತಿಳಿಸಿತ್ತು. ತಾಂತ್ರಿಕ ತೊಂದರೆಗಳಿಂದಾಗಿ ಅವರ ಮರಳುವಿಕೆ ವಿಳಂಬವಾಗಿತ್ತು. ಹಾಗಾಗಿ ಸುಮಾರು 9 ತಿಂಗಳ ಕಾಲ ಈ ಸಾಹಸಿಗಳು ಬಾಹ್ಯಾಕಾಶದಲ್ಲಿ ಉಳಿದುಕೊಂಡಿದ್ದರು.

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿದ್ದ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಕೂಡಾ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಅವರೊಂದಿಗೆ ಐಎಸ್‌ಎಸ್‌ ಕ್ರೂ-9 ಸದಸ್ಯರನ್ನು ಹೊತ್ತ ಸ್ಪೇಸ್‌ಎಕ್ಸ್ ಡ್ರ್ಯಾಗನ್ ನೌಕೆ ಫ್ಲೋರಿಡಾದ ಸಮುದ್ರದಲ್ಲಿ ಮುಂಜಾನೆ 3:27ರ ಸುಮಾರಿಗೆ ಪ್ಯಾರಾಚೂಟ್‌ಗಳ ಸಹಾಯದಿಂದ ಸುರಕ್ಷಿತವಾಗಿ ಇಳಿಯಿತು. ನಂತರ ಸುನೀತಾ ವಿಲಿಯಮ್ಸ್ ಮತ್ತು ಅವರ ಸಹ ಗಗನಯಾತ್ರಿಗಳ ಬಾಹ್ಯಾಕಾಶ ನೌಕೆಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು.

Related posts