ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ವಿಚಾರ ಭಾರೀ ಕೋಲಾಹಲ ಸೃಷ್ಟಿಸಿದೆ. ಸುಮಾರು 48 ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರೆ, ಇನ್ನೊಂದೆಡೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕನಿಷ್ಠ 400 ಜನರನ್ನು ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.
ಹನಿಟ್ರ್ಯಾಪ್ ಕೋಲಾಹಲ ಕುರಿತಂತೆ ಆರಂಭದಿಂದಲೂ ಆಕ್ರೋಶ ಹೊರಹಾಕುತ್ತಿದ್ದ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯದಿಂದ ಮಾತ್ರವಲ್ಲ, ದೆಹಲಿಯ ಅನೇಕ ನಾಯಕರು ಮತ್ತು ಅಧಿಕಾರಿಗಳನ್ನು ಕೂಡ ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ. ಎಲ್ಲಾ ಪಕ್ಷಗಳ ನಾಯಕರನ್ನು ಇದರಲ್ಲಿ ಸಿಲುಕಿಸಲಾಗಿದೆ ಎಂದು ಗಮನಸೆಳೆದಿದ್ದಾರೆ.
ಹನಿಟ್ರ್ಯಾಪ್ ಮಾಡಿ ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕಿರುವ ನಿದರ್ಶನಗಳು ಈ ಹಿಂದೆಯೂ ನಡೆದಿವೆ.ಕಳೆದ 20 ವರ್ಷಗಳಿಂದಲೂ ಹನಿಟ್ರ್ಯಾಪ್ ಆಗಿವೆ. ಈ ಕೃತ್ಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಅವರೌ ಪ್ರತಿಪಾದಿಸಿದ್ದಾರೆ.