ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿ ಭಾಷಿಗರಿಂದ ಕನ್ನಡಿಗರ ಮೇಲೆ ನಡೆದಿರುವ ದೌರ್ಜನ್ಯ ಖಂಡಿಸಿ ಕನ್ನಡ ಪರ ಸಂಘಟನೆಗಳು ಶನಿವಾರ ಕರ್ನಾಟಕ ಬಂದ್ಗೆ ಕರೆ ನೀಡಿವೆ.
ಬಂದ್ ಕರೆ ಬೆಂಬಲಿಸಿ ಹಲವಾರು ಅಂಗಡಿ-ಮುಂಗಟ್ಟುಗಳು ಮುಚ್ಚಿವೆ ಆದರೆ, ವಾಹನ ಸಂಚಾರಕ್ಕೆ ಅಡ್ಡಿಯಾಗಿಲ್ಲ. ಬೆಂಗಳೂರು ಸಹಿತ ರಾಜ್ಯದ ಬಹುತೇಕ ಕಡೆ ಬಂದ್ ಕರೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
#WATCH | Karnataka: Several pro-Kannada groups have called a bandh in the state today from 6 am to 6 pm, in protest against the alleged assault on a bus conductor in Belagavi for not speaking Marathi.
Visuals from Kalaburagi, where Police personnel have been deployed as a… pic.twitter.com/atR3C3pPxw
— ANI (@ANI) March 22, 2025
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಬೆಳಗಾವಿ ಸೇರಿದಂತೆ ಹಲವೆಡೆ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಹಲವೆಡೆ ಅಂಗಡಿಗಳನ್ನು ಮುಚ್ಚಿಸುವಂತೆ ಮನವೊಲಿಸುತ್ತಿದ್ದ ದೃಶ್ಯಗಳು ಕಂಡುಬಂತು.
#WATCH | Karnataka: Pro-Kannada activists protest in Mandya amid the 12-hour bandh called by pro-Kannada organisations. The bandh has been called in protest against the alleged assault on a bus conductor in Belagavi for not speaking Marathi. Visuals from Sanjaya Circle in the… pic.twitter.com/M51tPDwR0L
— ANI (@ANI) March 22, 2025
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.