ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ; ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಮಂಗಳವಾರ ದ್ವಿತೀಯ ಪಿಯುಸಿ ಪರೀಕ್ಷೆ -1 ರ ಫಲಿತಾಂಶ ಪ್ರಕಟಿಸಿದೆ.

ರಾಜ್ಯದಲ್ಲಿ ಪರೀಕ್ಷೆಗೆ ಹಾಜರಾದ 6,37,805 ವಿದ್ಯಾರ್ಥಿಗಳಲ್ಲಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಶೇ.73.45 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.81.15 ಫಲಿತಾಂಶ ಬಂದಿದ್ದು ಈ ಬಾರಿ ಕುಸಿತ ಕಂಡಿದೆ.
ಈ ಕುರಿತಂತೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತ್ಯುತ್ತಮ ಸ್ಥಾನ ಗಳಿಸಿದ್ದಾರೆ. ಮೂರು ವಿಭಾಗಗಳಲ್ಲಿಯೂ ಹುಡುಗಿಯರೇ ಹೆಚ್ಚಿನ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಕನ್ನಡ ಮಾಧ್ಯಮದಲ್ಲಿ 2,08,794 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1,17,703 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇಂಗ್ಲಿಷ್ ಮಾಧ್ಯಮದಲ್ಲಿ 4,29,011 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 3,50,736 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶಗಳನ್ನು karresults.nic.in ಅಥವಾ kseab.karnataka.gov.in ನಲ್ಲಿ ಪರಿಶೀಲಿಸಬಹುದು.

Related posts