ಬೆಂಗಳೂರು: ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಸಮೀಪ ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಶೂಟೌಟ್ ನಡೆದ್ದಾರೆ.
ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ಮಧ್ಯರಾತ್ರಿ ರಿಕ್ಕಿ ರೈ ತೆರಳುತ್ತಿದ್ದ ಕಾರಿನ ಮೇಲೆ 2 ಸುತ್ತಿನ ಗುಂಡಿನ ದಾಳಿ ನಡೆದಿದೆ. ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಲಾಗಿದೆ ಎನ್ನಲಾಗುತ್ತಿದ್ದು, ಈ ಘಟನೆಯಲ್ಲಿ ರಿಕ್ಕಿ ರೈ ಅವರ ಮೂಗು, ಕೈಗೆ ಗುಂಡು ತಗುಲಿದ್ದು, ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ವಿದೇಶದಲ್ಲಿದ್ದ ರಿಕ್ಕಿ ರೈ ಕೆಲವು ದಿನಗಳ ಹಿಂದಷ್ಟೇಬೆಂಗಳೂರಿಗೆ ವಾಪಸ್ ಆಗಿದ್ದರು. ಮುತ್ತಪ್ಪ ರೈ ಅವರ ಎದುರಾಳಿಗಳು ಹಳೇಯ ವೈಷಮ್ಯದ ಹಿನ್ನೆಲೆಯಲ್ಲಿ ಪುತ್ರ ರಿಕ್ಕಿ ರೈ ಮೇಲೆ ಸೇಡು ತೀರಿಸಿರಬಹುದೇ ಅಥವಾ ರಿಯಲ್ ಎಸ್ಟೇಟ್ ಉದ್ಯಮ ವೈಷಮ್ಯದಿಂದ ಈ ಕೃತ್ಯ ನಡೆದಿರಬಹುತ್ತು ಎಂಬ ಸಂಶಯವೂ ವ್ಯಕ್ತವಾಗಿದೆ.
ಸ್ಥಳಕ್ಕೆ ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುತ್ತಪ್ಪ ರೈ ಮನೆ ಸಮೀಪದ ಜಮೀನೊಂದರ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಅವಿತು ಕುಳಿತು ಗುಂಡಿನ ದಾಳಿ ನಡೆಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಶೂಟರ್ ಹರಿಸಿದ ಗುಂಡು ಕಾರಿನ ಬಾಗಿಲನ್ನು ಛೇಧಿಸಿ ಸೀಟಿಗೆ ಅಪ್ಪಳಿಸಿದಂತಿದ್ದು ಬಳಿಕ ಕಾರಿನೊಳಗಿದ್ದವರಿಗೆ ತಗುಲಿದಂತಿದೆ. ಈ ಬಗ್ಗೆ ಪರಿಶೀಲನೆ ನಡೆಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.