ನಿವೃತ್ತ ಡಿಜಿಪಿ ಓಂ ಪ್ರಕಾಶ್ ಬರ್ಬರ ಹತ್ಯೆ..

ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಬರ್ಬರ ಹತ್ಯೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್‌ನಲ್ಲಿರುವ ಅವರ ಮನೆಯಲ್ಲಿ ಮೃತದೇಹವು ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೃತದೇಹವನ್ನು ಪರಿಶೀಲಿಸಿರುವ ಪೊಲೀಸರು ಇದು ಕೊಲೆ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ 38ನೇ ಡಿಜಿ-ಐಜಿ ಆಗಿದ್ದ ಓಂಪ್ರಕಾಶ್ ಅವರಿಗೆ 68 ವರ್ಷ ವುಸ್ಸಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿರುವ ಹಿರಿಯ ಪೊಲೀಸ್ ಅಧಿಕಾರಿಗಳು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Related posts