ದೆಹಲಿ: ಶರವೇಗದಲ್ಲಿ ಹಾಡುತ್ತಿರುವ ಮಹಾಮಾರಿ ಕೊರೋನಾ ಭಾರತದಲ್ಲಿ ಹೆಚ್ಚುತ್ತಲೇ ಇದ್ದು, ಬಲಿಯಾದವರ ಸಂಖ್ಯೆಯೂ 28ಕ್ಕೆ ತಲುಪಿದೆ. ಒಂದು ವರದಿಯ ಪ್ರಕಾರ ದೇಶದಲ್ಲಿ 1100ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ದೆಹಲಿಯಲ್ಲೇ ನಿನ್ನೆ 23 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಉತ್ತರಪ್ರದೇಶ, ಮಹಾರಾಷ್ಟ್ರ , ಬಿಹಾರ, ಕರ್ನಾಟಕ ರಾಜ್ಯಗಳಲ್ಲೂ ಹೊಸ ಪ್ರಕರಣಗಳು ಬೆಳಕಿಗೆ ಬಂದಿರುವುದರಿಂದಾಗಿ ಕೊರೋನಾ ಆತಂಕ ಸಹಜವಾಗಿಯೇ ಹೆಚ್ಚಳವಾಗಿದೆ. ಡೈನ್ ಡೈನ್ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಅಂತಾರಾಜ್ಯ ಗಡಿಗಳನ್ನು ಮುಚ್ಚಲಾಗಿದೆ. ಕೂಲಿ ಕಾರ್ಮಿಕರ ವಲಸೆಗೂ ಬ್ರೇಕ್ ಹಾಕಲಾಗಿದೆ.
ಪ್ರಧಾನಿಗೆ ರಾಹುಲ್ ಗಾಂಧಿ ಪತ್ರ
ಜಗತ್ತಿಗೆ ಸಂಕಷ್ಟವೊಡ್ಡಿರುವ ಕೊನಿಯಂತ್ರಿಸಲು ನಾನೂ, ನಮ್ಮ ಪಕ್ಷದ ಕೋಟ್ಯಂತರ ಕಾರ್ಯಕರ್ತರು ನಿಮ್ಮ ಜತೆ ನಿಲ್ಲುತ್ತೇವೆ ಎಂದು ಪ್ರಧಾನಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ. ಕೊರೋನಾ ಸೋಂಕು ನಿಯಂತ್ರಣ ವಿಚಾರದಲ್ಲಿ ಸರ್ಕಾರದ ಎಲ್ಲ ನಿರ್ಧಾರಗಳಿಗೂ ನಾವು ಸರ್ವ ರೀತಿಯ ಸಹಕಾರವನ್ನು ನೀಡುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಈ ನಡುವೆ ಕೊರೋನಾ ವಿಚಾರದಲ್ಲಿ ವೈದ್ಯರು ಸೇಫ್ ಅಲ್ಲ ಎಂಬುದು ಪ್ರಸ್ತುತ ಪರಿಸ್ಥಿತಿಯಲ್ಲಿ ಗೊತ್ತಾಗಿದೆ. ದೆಹಲಿಯ ಡಾ.ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ರೋಗಿಗೆ ಚಿಕಿತ್ಸೆ ನೀಡುತ್ತಿದ್ದ 6 ವೈದ್ಯರು, ನಾಲ್ವರು ದಾದಿಯರಿಗೂ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು ಇವರನ್ನು 14 ದಿನಗಳ ಕ್ವಾರಂಟೈನ್ ಗೆ ಹಾಕಲಾಗಿದೆ.