4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ‘ಗಣೇಶನ ಆಕೃತಿ’ ರಚನೆ

ಕೊಪ್ಪಳ: ಗಂಗಾವತಿ ತಾಲೂಕಿನ ಶ್ರೀರಾಮನಗರದ ನಮ್ಮ ಶ್ರೀ ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ ಗಣೇಶೋತ್ಸವದ ಅಂಗವಾಗಿ “4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ಗಾತ್ರದ ಗಣೇಶನ ಆಕೃತಿಯನ್ನು ರಚಿಸಿ ದೀಪಗಳನ್ನು ಬೆಳಗಿಸಿ ಗಣೇಶನಿಗೆ ವೈಶಿಷ್ಟ್ಯಪೂರ್ಣವಾದ ಅಹ್ವಾನವನ್ನು ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅತ್ಯಂತ ಸಂಭ್ರಮ ಸಂತೋಷದಿAದ ಪಾಲ್ಗೊಂಡು ವಿನಾಯಕನಿಗೆ ಜೈಕಾರವನ್ನು ಹಾಕಿ ದೀಪಗಳಿಂದ ಗಣೇಶನ ಆಕೃತಿಯನ್ನು ಮೂಡಿಸಿದರು.

ಶಾಲೆಯ ಪೂರ್ವ ಪ್ರಾಥಮಿಕದಿಂದ ಎಂಟನೆಯ ತರಗತಿಯ ಸುಮಾರು 2000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನು ಮಾಡಿಸಲಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರದ ಕುರಿತು ಕಾಳಜಿಯನ್ನು ಬೆಳೆಸುವುದರೊಂದಿಗೆ ಅವರಲ್ಲಿ ಅಂತರ್ಗತವಾಗಿರುವ ಕರಕುಶಲ ಸಾಮರ್ಥ್ಯ ಹಾಗು ಸೃಜನಶೀಲತೆಯನ್ನು ಅಭಿವ್ಯಕ್ತಗೊಳಿಸಲು ಶಾಲೆಯ ಕಲಾ ಮತ್ತು ಕರಕುಶಲ ವಿಭಾಗದ ಶಿಕ್ಷಕರಾದ ವಿನೋದ್‌ಕುಮಾರ್ ಅವರ ಮಾರ್ಗದರ್ಶನದಲ್ಲಿ ಎಲ್ಲ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ವಿಶಿಷ್ಟ ರೀತಿಯಲ್ಲಿ ನಾನಾ ವಿಧದ ಗಣೇಶನ ಮೂರ್ತಿಗಳನ್ನು ತಯಾರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ನೆಕ್ಕಂಟಿ ಸೂರಿಬಾಬು ಅವರು ವಿದ್ಯಾರ್ಥಿಗಳಿಗೆ ಸ್ಫೋಒರ್ತಿಯಾದರು. ಉಪಾಧ್ಯಕ್ಷರಾದ ನೆಕ್ಕಂಟಿ ಆದರ್ಶ, ಆಡಳಿತ ನಿರ್ದೇಶಕರಾದ ಹೆಚ್. ಕೆ ಚಂದ್ರಮೋಹನ್, ಶಾಲೆಯ ಸಿಇಓ ನರೇಶ ವೈ, ಶೈಕ್ಷಣಿಕ ಮುಖ್ಯಸ್ಥರಾದ ಕೃಷ್ಣವೇಣಿ, ಕ್ಯಾಂಪಸ್ ಮ್ಯಾನೇಜರ್ ಜಿ ನಾಗೇಶ್ವರ್‌ರಾವ್, ಶಾಲೆಯ ಉಪ ಪ್ರಾಂಶುಪಾಲರಾದ ಲಕ್ಷ್ಮಿ, ವಸತಿನಿಲಯದ ಮುಖ್ಯ ನಿರ್ವಾಹಕ ಕಾಳೇಶ ಎನ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Related posts