ಕಠ್ಮಂಡು: ನೇಪಾಳದಲ್ಲಿ ಸರ್ಕಾರದ ವಿರುದ್ಧ ಜನರು ಬಂಡಾಯ ಎದ್ದಿದ್ದಾರೆ. ಸಂಘರ್ಷ ತಾರಕಕ್ಕೇರಿರುವಂತೆಯೇ ಪ್ರಧಾನಿ ಕೆಪಿ ಶರ್ಮಾ ಒಲಿ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ ಎಂಬ ಸುದ್ದಿ ಹರಿದಾಡಿದೆ.
ಚೀನಾ ದೇಶದ ಪರ ಒಲವು ಹೊಂದಿದ್ದಾರೆ ಎನ್ನಲಾದ ಪ್ರಧಾನಿ ಕೆಪಿ ಶರ್ಮಾ ಒಲಿ ವಿರುದ್ಧ ಜನರ ಆಕ್ರೋಶ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಅವರು ಫೇಸ್ ಬುಕ್, ಟ್ವಿಟರ್ ಮತ್ತು ಇನ್ ಸ್ಟಾಗ್ರಾಮ್ ಸಹಿತ ಸಾಮಾಜಿಕ ಮಾಧ್ಯಮಗಳನ್ನು ನಿಷೇಧಿಸಲು ಮುಂದಾದರು. ಇದನ್ನು ಖಂಡಿಸಿ ನೇಪಾಳದಾದ್ಯಂತ ವ್ಯಾಪಕ ಪ್ರತಿಭಟನೆ ನಡೆದಿದೆ.
ನೇಪಾಳದ ವಿದ್ಯಾರ್ಥಿಗಳು ಮತ್ತು ಯುವಕರ ನೇತೃತ್ವದಲ್ಲಿ ನಡೆದ ಬೃಹತ್ ಸರ್ಕಾರಿ ವಿರೋಧಿ ಪ್ರತಿಭಟನೆಗಳು ಎರಡನೇ ದಿನದಂದು ಹಿಂಸಾರೂಪ ಪಡೆಯಿತು. ಪ್ರತಿಭಟನಾಕಾರರು ಬಾಲ್ಕೋಟ್ ನಲ್ಲಿರುವ ಪ್ರಧಾನಿ ಕೆಪಿ ಒಲಿ ಅವರ ಖಾಸಗಿ ನಿವಾಸಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ನಡೆಯಿತು.
नेपाल में सरकार के खिलाफ भारी विरोध प्रदर्शन. प्रदर्शनकारियों ने नेपाल की संसद में लगाई आग.
Protest | Nepal pic.twitter.com/Az8Xp30oaf
— The Lallantop (@TheLallantop) September 9, 2025