ಬೆಂಗಳೂರು: ಉತ್ತರ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ, ಬೆಳಗಾವಿಯಲ್ಲಿ ತಿರುಪತಿ – ತಿರುಮಲ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದು ಟಿಟಿಡಿ ಸದಸ್ಯರಾದ ಎಸ್ ನರೇಶ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನ ವೈಯಾಲಿಕಾವಲ್ನಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದರು.
16.09.2025 ರಂದು ನಡೆದ ಟಿಟಿಡಿ ಆಡಳಿತ ಮಂಡಳಿ ಸಭೆಯಲ್ಲಿ ಈ ಬಗ್ಗೆ ವಿಸ್ತ್ರುತವಾಗಿ ಚರ್ಚಿಸಲಾಯಿತು. ಬೆಂಗಳೂರು ಹಾಗೂ ದೇಶದ ಇತರೆ ಭಾಗಗಳಲ್ಲಿ ಇರುವಂತೆ ಬೆಳಗಾವಿಯಲ್ಲೂ ದೇವಸ್ಥಾನ ನಿರ್ಮಿಸುವುದರಿಂದ ಆಭಾಗದ ಭಕ್ತಾದಿಗಳಿಗೆ ಅನುಕೂಲವಾಗಲಿದೆ ಎಂದರು.
ಪ್ರತಿ ಬಾರಿಯೂ ತಿರುಪತಿ-ತಿರುಮಲಕ್ಕೆ ಭೇಟಿ ನೀಡುವ ಬದಲಾಗಿ, ಸ್ಥಳೀಯವಾಗಿಯೇ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಭಾಗ್ಯ ಲಭಿಸಲಿದೆ. ಮುಂದಿನ ದಿನಗಳಲ್ಲಿ ಟಿಟಿಡಿ ಅಧ್ಯಕ್ಷರಾದ ಬಿ ಆರ್ ನಾಯ್ಡು ಅವರು ಬೆಳಗಾವಿಗೆ ಭೇಟಿ ನೀಡಿ ಮುಂದಿನ ಕಾರ್ಯಗಳನ್ನು ಪರಿಶೀಲಿಸಲಿದ್ದಾರೆ ಎಂದರು