ಬೆಂಗಳೂರು: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪಾಳೇಗಾರಿಕೆ ಸಂಸ್ಕೃತಿಗೆ ಜಾಗವಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜನಪ್ರತಿನಿಧಿಯನ್ನು ಅಪಮಾನಿಸಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಅಗೌರವ ತೋರಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಸ್ಥಳೀಯ ಶಾಸಕ ಮುನಿರತ್ನರನ್ನೇ ಆಹ್ವಾನಿಸದೆ, ಶಾಸಕರೊಂದಿಗೆ ಉಡಾಫೆಯಿಂದ ವರ್ತಿಸಿರುವುದು ಹಾಗೂ ಅವರು ಧರಿಸಿದ್ದ RSS ಗಣವೇಶವನ್ನು ಅಪಮಾನಿಸಿರುವುದು ಉದ್ಧಟತನದ ಪರಮಾವಧಿಯಾಗಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಡಿಕೆ ಶಿವಕುಮಾರ್ ಅವರ ಈ ನಡೆ ಸರ್ವಾಧಿಕಾರಿತನವನ್ನು ಪ್ರತಿಬಿಂಬಿಸಿದೆ ಎಂದು ಪ್ರತಿಕ್ರಿಯಿಸಿರುವ ವಿಜಯೇಂದ್ರ ಅಧಿಕಾರ ಶಾಶ್ವತವಲ್ಲ, ಅದು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನರು ನೀಡುವ ಭಿಕ್ಷೆ ಎಂಬ ಪರಿಜ್ಞಾನವಿಲ್ಲದೆ ನಡೆದುಕೊಳ್ಳುತ್ತಿರುವ ಅವರ ವರ್ತನೆ ಅತ್ಯಂತ ಖಂಡನೀಯ. ಅವರ ನಡೆ, ನುಡಿ, ವರ್ತನೆಯನ್ನು ಜನರು ಗಮನಿಸುತ್ತಿದ್ದಾರೆ, ತಕ್ಕ ಉತ್ತರದ ಪಾಠವನ್ನು ಇಷ್ಟರಲ್ಲೇ ಕಲಿಸಲಿದ್ದಾರೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪಾಳೇಗಾರಿಕೆ ಸಂಸ್ಕೃತಿಗೆ ಜಾಗವಿಲ್ಲ. ಉಪಮುಖ್ಯಮಂತ್ರಿ @DKShivakumar ಅವರು ಜನಪ್ರತಿನಿಧಿಯನ್ನು ಅಪಮಾನಿಸಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಅಗೌರವ ತೋರಿಸಿದ್ದಾರೆ. ಶಾಸಕ @MunirathnaMLA ಅವರ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಸ್ಥಳೀಯ… pic.twitter.com/l64RQDweiF
— Vijayendra Yediyurappa (@BYVijayendra) October 12, 2025