RSS ಪಥಸಂಚಲನದಲ್ಲಿ ಭಾಗವಹಿಸಿದ್ದ ಪಿಡಿಓ ಪ್ರವೀಣ್ ಕುಮಾರ್ ಅಮಾನತು ಆದೇಶಕ್ಕೆ ಕೆಎಸ್‌ಎಟಿ ತಡೆ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ಅಸ್ತಿತ್ವದಲ್ಲಿಲ್ಲದ ಕಾನೂನು ಅಸ್ತ್ರ ಪ್ರಯೋಗಿಸಲು ಪ್ರಯತ್ನಿಸುತ್ತಿರುವ ಸರ್ಕಾರಕ್ಕೆ ಮತ್ತೆ ಮತ್ತೆ ಮುಜುಗರದ ಸನ್ನಿವೇಶ ಎದುರಾಗುತ್ತಿದೆ. ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದ ಕಾರಣಕ್ಕಾಗಿ ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗವಾಗಿದೆ.

ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ, ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿರುವ ಆದೇಶಕ್ಕೆ ಕೆಎಸ್‌ಎಟಿ (ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ) ತಡೆ ನೀಡಿದೆ.

ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಸಾಮಾಜಿಕ ಮಾಧ್ಯಮ ‘X’ನಲ್ಲಿ ಪ್ರತಿಕ್ರಿಯಿಸಿದ್ದು, ‘ರಾಯಚೂರಿನ ಲಿಂಗಸೂಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಪಿಡಿಒ ಪ್ರವೀಣ್‌ಕುಮಾರ್ ಅವರನ್ನು ಅಮಾನತುಗೊಳಿಸಿರುವುದನ್ನು ನನ್ನ ಕಾನೂನು ಕಚೇರಿಯು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಮುಂದೆ ಪ್ರಶ್ನಿಸಿತ್ತು. ರಾಜಕೀಯ ಒತ್ತಡದಿಂದ ಯಾಂತ್ರಿಕವಾಗಿ ಜಾರಿಯಾಗಿದ್ದ ಅಮಾನತು ಆದೇಶಕ್ಕೆ ಕೆಎಸ್‌ಎಟಿ ತಡೆ ನೀಡಿದೆ’ ಎಂದು ತಿಳಿಸಿದ್ದಾರೆ.

ಆರೆಸ್ಸೆಸ್‌ನ ರಾಷ್ಟ್ರ ನಿರ್ಮಾಣದ ಆದರ್ಶಗಳನ್ನು ಯಾವುದೇ ಬೆದರಿಕೆಯಿಂದ ತಡೆಯಲು ಸಾಧ್ಯವಿಲ್ಲ ಎಂಬುದಕ್ಕೆ ಇದು ಕಾಂಗ್ರೆಸ್ ಸರಕಾರಕ್ಕೆ ಪಾಠವಾಗಬೇಕು’ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

Related posts