ತೆಲಂಗಾಣದಲ್ಲಿ ಭೀಕರ ಅಪಘಾತ; 16 ಮಂದಿ ದುರ್ಮರಣ

ವಿಕಾರಾಬಾದ್: ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ಚೆವೆಲ್ಲಾ ಸಮೀಪದ ಮಿರ್ಜಗುಡದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 16 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಜಲ್ಲಿ ತುಂಬಿದ್ದ ಟ್ರಕ್ ಒಂದು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ.

ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು.

Related posts