ಹರಿಯಾಣದಲ್ಲಿ ಮತಗಳ್ಳತನ; ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ಹರಿಯಾಣ ರಾಜ್ಯದಲ್ಲಿ ನಡೆದ 25 ಲಕ್ಷಕ್ಕೂ ಹೆಚ್ಚು ಮತಗಳ್ಳತನದ ಘಟನೆ ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಮೇಲೆ ನಡೆದ ಅತ್ಯಂತ ದೊಡ್ಡ ದಾಳಿ ಎಂದು ರಾಜ್ಯ ಯುವ ಕಾಂಗ್ರೆಸ್ ಖಂಡಿಸಿದೆ.

ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ನಿರ್ಲಕ್ಷ್ಯ ಮತ್ತು ಜನರ ಮತಹಕ್ಕಿನ ಅಪಹರಣದ ವಿರುದ್ಧವಾಗಿ, ರಾಜ್ಯ ಯುವ ಕಾಂಗ್ರೆಸ್ ಸಮಿತಿ ಇಂದು ಸಂಜೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಮಂಜುನಾಥ ಗೌಡರು ಅವರ ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಯಿತು.

ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ನಡೆಯನ್ನು ಖಂಡಿಸಿದ ನಾಯಕರು ಪ್ರತಿಕೃತಿ ದಹನ ಮಾಡಿ ಆಕ್ರೋಶ ಹೊರಹಾಕಿದರು.

ಈ ಪ್ರತಿಭಟನೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಸಮಿತಿಯು ಎಲ್ಲಾ ಜಿಲ್ಲಾ ಮತ್ತು ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರು, ಕಮಿಟಿ ಸದಸ್ಯರು, ಪದಾಧಿಕಾರಿಗಳು ಭಾಗವಹಿಸಿದ್ದರು.

Related posts