ಬಿಹಾರ: 10ನೇ ಬಾರಿಗೆ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ

ಪಾಟ್ನಾ: ಬಿಹಾರದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನಿತೀಶ್ ಕುಮಾರ್ ಅವರು 10ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.


ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಗುರುವಾರ ದಾಖಲೆಯ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಗುರುವಾರ ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಅವರು ಪ್ರಮಾಣವಚನ ಸ್ವೀಕರಿಸಿದರು.

ಇದೇ ವೇಳೆ, ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.

ಬಿಹಾರ ರಾಜ್ಯಪಾಲ ಆರಿಫ್ ಮೊಹ್ಮದ್ ಖಾನ್ ಅವರು ನೂತನ ಸಿಎಂ ಡಿಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ಜೆ.ಪಿ. ನಡ್ಡಾ, ಸಹಿತ ಕೇಂದ್ರ ಸಚಿವರು ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

Related posts