ಡಿಕೆಶಿ-ಸಿದ್ದರಾಮಯ್ಯ ಜಟಾಪಟಿ ವಿಚಾರ: ಕಾಂಗ್ರೆಸ್ ಹೈಕಮಾಂಡ್ ದುರ್ಬಲ ಎಂದ ಅಶೋಕ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಜಗಳ ಬಿಟ್ಟು ಬೇರೇನೂ ಆಗಿರಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ಪಕ್ಷದ ಬೆಳವಣಿಗೆ ಬಗ್ಗೆ ಅಶೋಕ್ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯಿಸಿದರು. ‘ಸಿಎಂ ಯಾರೆಂದು ಗೊತ್ತಾಗದೆ ಇಬ್ಬರೂ ನಾಯಕರ ನಡುವೆ ಕಾದಾಟ ಜೋರಾಗಿದೆ. ಸಿದ್ದರಾಮಯ್ಯ ಎಂದರೆ ಮಾತು ತಪ್ಪಿದವರು ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಇದರಿಂದಾಗಿ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ. ಸರ್ಕಾರದಲ್ಲಿ ಎಲ್ಲರೂ ಕೆಲಸ ಮಾಡುವುದನ್ನು ಬಿಟ್ಟು ಸಿಎಂ ಯಾರೆಂದು ಚರ್ಚಿಸುತ್ತಿದ್ದಾರೆ’ ಎಂದು ವಿಶ್ಲೇಷಿಸಿದರು.

ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಜಗಳ ಬಿಟ್ಟು ಬೇರೇನೂ ಆಗುವುದಿಲ್ಲ. ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಡಿ.ಕೆ.ಶಿವಕುಮಾರ್‌ ನೇರವಾಗಿ ಹೇಳಿದ್ದು, ಈ ಬಗ್ಗೆ ದುರ್ಬಲ ಹೈಕಮಾಂಡ್‌ ಪ್ರತಿಕ್ರಿಯೆ ನೀಡುತ್ತಿಲ್ಲ. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ವಿದೇಶಕ್ಕೆ ಪಲಾಯನ ಮಾಡಿದ್ದಾರೆ ಎಂದರು.

Related posts