ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ದಿನಗಳ ಅಧಿಕೃತ ಭಾರತ ಭೇಟಿಗೆ ಗುರುವಾರ ರಾತ್ರಿ ನವದೆಹಲಿಗೆ ಆಗಮಿಸಿದರು. ಪ್ರಧಾನಿ ನರೇಂದ್ರ ಮೋದಿ ಸ್ವತಃ ವಿಮಾನ ನಿಲ್ದಾಣಕ್ಕೆ ತೆರಳಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ವಿಮಾನದಿಂದ ಇಳಿದ ಬಳಿಕ ಇಬ್ಬರು ನಾಯಕರು ಪರಸ್ಪರ ಅಪ್ಪಿಕೊಂಡು ಮಾತನಾಡಿದರು. ಬಳಿಕ ಅಲ್ಪಕಾಲದ ಸಾಂಸ್ಕೃತಿಕ ಸ್ವಾಗತ ಕಾರ್ಯಕ್ರಮವನ್ನು ವೀಕ್ಷಿಸಿದರು. ವಿಮಾನ ನಿಲ್ದಾಣದಿಂದ ಇಬ್ಬರೂ ಒಂದೇ ವಾಹನದಲ್ಲಿ ಹೊರಟು ಗಮನಸೆಳೆದರು.
ಪುಟಿನ್ ಭೇಟಿಯ ಸಂದರ್ಭದಲ್ಲಿ ಭಾರತ-ರಷ್ಯಾ ನಡುವೆ ಮಹತ್ವದ ಒಪ್ಪಂದಗಳು ಏರ್ಪಡಲಿವೆ ಎಂದು ಮೂಲಗಳು ತಿಳಿಸಿವೆ.

Related posts