ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ; ಸಿಎಂ ಭರವಸೆ.

ಬೆಂಗಳೂರು: ಗೃಹಲಕ್ಷ್ಮಿ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಂಗರೊಂದಿಗೆ ಮಾತನಾಡಿದ ಅವರು, ಫೆಬ್ರವರಿ – ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದರು.
23 ತಿಂಗಳ ಗೃಹಲಕ್ಷ್ಮಿ ಹಣವನ್ನು ಸರ್ಕಾರದ ಬಳಿ ಹಣವಿಲ್ಲದೆ ಕೊಡಲು ಸಾಧ್ಯವಾಗುತ್ತಿತ್ತೇ? ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಎಲ್ಲಿಂದ ಉದ್ಭವವಾಗುತ್ತದೆ? ಹಣವನ್ನು ಯಾರು ತೆಗೆದುಕೊಳ್ಳಲಾಗುವುದಿಲ್ಲ, ಹಣ ಇನ್ನು ಬಿಡುಗಡೆಯಾಗಿಲ್ಲ ಅಷ್ಟೆ ಎಂದರು.

Related posts