ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ನಂತರ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ, ಕೊಲೆ ಬೆದರಿಕೆ ಸಾಮಾನ್ಯ ಎಂಬಂತಾಗಿದೆ ಎಂದು ಬಿಜೆಪಿ ದೂರಿದೆ.
ಶಿಡ್ಲಘಟ್ಟದಲ್ಲಿ ಮಹಿಳಾ ಅಧಿಕಾರಿಯ ಮೇಲೆ ಕಾಂಗ್ರೆಸ್ ನಾಯಕನ ದಬ್ಬಾಳಿಕೆ ನಡೆದ ಎರಡೇ ದಿನದಲ್ಲಿ ಸಿಎಂ ಸಿದ್ದರಾಮಯ್ಯ ಅವರ ತವರು ಕ್ಷೇತ್ರವಾದ ವರುಣಾದಲ್ಲಿ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ, ಕೊಲೆ ಬೆದರಿಕೆ ನಡೆದಿದೆ ಎಂದು ಬಿಜೆಪಿ ದೂರಿದೆ.
ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಬಿಜೆಪಿ, ‘ಜಮೀನು ಪರಿಶೀಲನೆಗೆ ತೆರಳಿದ್ದ ಗ್ರಾಮ ಆಡಳಿತಾಧಿಕಾರಿ ಭವ್ಯಾ ಮತ್ತು ಗ್ರಾಮ ಸಹಾಯಕ ನವೀನ್ ಕುಮಾರ್ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೇ ಮಹಿಳಾ ಅಧಿಕಾರಿಗೆ ರಕ್ಷಣೆ ಇಲ್ಲವೆಂದರೆ, ರಾಜ್ಯದ ಉಳಿದೆಡೆ ಸಾಮಾನ್ಯ ಮಹಿಳೆಯರ ಗತಿಯೇನು? ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಎಂದು ಸಿದ್ದರಾಮಯ್ಯ ಸರ್ಕಾರವನ್ನು ಪ್ರಶ್ನಿಸಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ನಂತರ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ, ಕೊಲೆ ಬೆದರಿಕೆ ಸಾಮಾನ್ಯ ಎಂಬಂತಾಗಿದೆ.
ಶಿಡ್ಲಘಟ್ಟದಲ್ಲಿ ಮಹಿಳಾ ಅಧಿಕಾರಿಯ ಮೇಲೆ ಕಾಂಗ್ರೆಸ್ ನಾಯಕನ ದಬ್ಬಾಳಿಕೆ ನಡೆದ ಎರಡೇ ದಿನದಲ್ಲಿ ಸಿಎಂ @siddaramaiah ಅವರ ತವರು ಕ್ಷೇತ್ರವಾದ ವರುಣಾದಲ್ಲಿ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ, ಕೊಲೆ ಬೆದರಿಕೆ… pic.twitter.com/cpv1LK3THF— BJP Karnataka (@BJP4Karnataka) January 17, 2026
