ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣ ಆರೋಪವನ್ನು ಮುಂದಿಟ್ಟು ಬಿಜೆಪಿ ಶಾಸಕರು ಹೋರಾಟವನ್ನು ಮುಂದುವರಿಸಿದ್ದಾರೆ.
ಮಂಗಳವಾರ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿರುವ ಶಾಸಕರು, ಅಬಕಾರಿ ಸಚಿವರ ರಾಜೀನಾಮೆಗೆ ಪಟ್ಟುಹಿಡಿದರು. ವಿಧಾನ ಪರಿಷತ್ ಸದಸ್ಯರೂ ಈ ಹೋರಾಟವನ್ನು ಬೆಂಬಲಿಸಿದ್ದು, ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಅಹೋರಾತ್ರಿ ಧರಣಿ ನಡೆಸಿ ಗಮನಸೆಳೆದರು.
ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ.#CongressFailsKarnataka#CongressLootsKarnataka pic.twitter.com/gIXKHQR4o3
— N Ravi Kumar (@nrkbjp) February 4, 2026
