ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಕಿರುತೆರೆ ಖ್ಯಾತ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮನೆಯಲ್ಲಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮಿಲನ, ಆರ್ಕೆಸ್ಟ್ರಾ ಮೈಸೂರು, ಯು ಟರ್ನ್ ಹಾಗೂ ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು ಸೇರಿದಂತೆ ಹಲವು ಸಿನಿಮಾಗಳಲ್ಲಿ ದಿಲೀಪ್ ರಾಜ್ ಅಭಿನಯಿಸಿದ್ದರು.

ಸಿನಿಮಾ ಜೊತೆಗೆ ಕಿರುತೆರೆಯಲ್ಲೂ ಅವರು ಗುರುತಿಸಿಕೊಂಡಿದ್ದರು. ಹಿಟ್ಲರ್ ಕಲ್ಯಾಣ ಧಾರಾವಾಹಿಯಲ್ಲಿ ಅಭಿನಯಿಸಿದ್ದ ಅವರು, ಪಾರು ಮತ್ತು ನಾ ನಿನ್ನ ಬಿಡಲಾರೆ ಧಾರಾವಾಹಿಗಳನ್ನು ನಿರ್ಮಿಸಿದ್ದರು.

ದಿಲೀಪ್ ರಾಜ್ ನಿಧನಕ್ಕೆ ಚಿತ್ರರಂಗದ ಗಣ್ಯರು, ಸಹ ಕಲಾವಿದರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

Related posts