ಕೇರಳಕ್ಕೆ ಜೂ4ರಂದು ಮುಂಗಾರು ಪ್ರವೇಶ; ಕರ್ನಾಟಕಕ್ಕೆ ಜೂ. 7-8ರೊಳಗೆ ಆಗಮನ ಸಾಧ್ಯತೆ

ನವದೆಹಲಿ: ನೈಋತ್ಯ ಮುಂಗಾರು ಜೂನ್ 4ರಂದು ಕೇರಳ ಕರಾವಳಿಯನ್ನು ಅಧಿಕೃತವಾಗಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

ಮುಂಗಾರು ಪ್ರವೇಶದ ಹಿನ್ನೆಲೆಯಲ್ಲಿ ಕೇರಳದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಕೆಲವೆಡೆ ಭಾರೀ ಮಳೆಯೊಂದಿಗೆ ಬಲವಾದ ಗಾಳಿಯೂ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ಇನ್ನೊಂದೆಡೆ, ಕೇರಳ ಪ್ರವೇಶದ ಕೆಲವೇ ದಿನಗಳಲ್ಲಿ ಮುಂಗಾರು ಕರ್ನಾಟಕದತ್ತ ಚಲಿಸುವ ಸಾಧ್ಯತೆ ಇದೆ. ಹವಾಮಾನ ತಜ್ಞರ ಪ್ರಕಾರ, ಜೂನ್ 7 ಅಥವಾ 8ರ ವೇಳೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮುಂಗಾರು ಮಾರುತಗಳು ಸಕ್ರಿಯವಾಗುವ ಸಾಧ್ಯತೆ ಇದೆ.

ಈ ಬಾರಿ ‘ಎಲ್ ನಿನೋ’ ಪರಿಣಾಮದ ಹಿನ್ನೆಲೆಯಲ್ಲಿ ದೇಶದ ಹಲವೆಡೆ ಮಳೆಯ ಪ್ರಮಾಣ ಸಾಮಾನ್ಯ ಮಟ್ಟಕ್ಕಿಂತ ಸ್ವಲ್ಪ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಆದಾಗ್ಯೂ, ಮುಂಗಾರು ಆರಂಭದ ಹಂತದಲ್ಲಿ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

 

Related posts