ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ

ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ,, ಜೀವ ಬೆದರಿಕೆ ಹಾಕಿರುವ ಆರೋಪದದಲ್ಲಿರುವ ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಯಿತು.

ಗೋಪಾಲ್ ಜೋಶಿ ವಿರುದ್ಧ ಮಹಿಳೆಯೊಬ್ಬರು ಮಾಡಿರುವ ಲೈಂಗಿಕ ದೌರ್ಜನ್ಯದ ಆರೋಪಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆಗೆ ನಾಯಕರು ಆಗ್ರಹಿಸಿದೂರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ “ಮಹಿಳೆಯೊಬ್ಬರು ಮಾಡಿರುವ ಅತ್ಯಂತ ಗಂಭೀರ ಆರೋಪಗಳ ಬಗ್ಗೆ ಸರ್ಕಾರ ಹಾಗೂ ಪೊಲೀಸ್ ತನಿಖಾ ಸಂಸ್ಥೆಗಳು ಯಾವುದೇ ರಾಜಕೀಯ ಒತ್ತಡವಿಲ್ಲದೆ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು. ಆರೋಪಗಳು ಸಾಬೀತಾದಲ್ಲಿ ತಪ್ಪಿತಸ್ಥ ಆರೋಪಿಯನ್ನು ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದೀಗ ಅವರ ಸಹೋದರ ಗೋಪಾಲ್ ಜೋಶಿ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ ರವರ ಹೆಸರಿನಲ್ಲಿ ಎರಡು ಕೋಟಿ ಹಣ ವಂಚನೆ ಮಾಡಿದ್ದು ಈಗಾಗಲೇ ಬಹಿರಂಗವಾಗಿದೆ, ಈಗ ಮತ್ತೇ ಈತನ ವಿರುದ್ಧ ಮಹಿಳೆಯೊಬ್ಬರು ಮಾಡಿರುವ ಗಂಭೀರ ಆರೋಪಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಬಂದಿವೆ ಇಂತಹ ಆರೋಪಗಳನ್ನು ರಾಜಕೀಯ ಬಣ್ಣದಲ್ಲಿ ನೋಡುವ ಬದಲು, ಸಂತ್ರಸ್ತ ಮಹಿಳೆಗೆ ನ್ಯಾಯ ದೊರಕಿಸುವುದು ಮುಖ್ಯವಾಗಿದೆ ಎಂದು ಹೇಳಿದರು.

ಮಹಿಳೆಯರ ಮೇಲೆ ನಡೆಯುವ ಯಾವುದೇ ರೀತಿಯ ದೌರ್ಜನ್ಯವನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಆರೋಪಿತ ಎಷ್ಟೇ ಪ್ರಭಾವಿ ವ್ಯಕ್ತಿಗಳಾಗಿದ್ದರೂ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಸಂದೇಶವನ್ನು ಸರ್ಕಾರ ಹಾಗೂ ಪೋಲಿಸ್ ಇಲಾಖೆ ಸ್ಪಷ್ಟವಾಗಿ ರವಾನಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಪ್ರತಿಭಟನ ಸಂಧರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಜಿ‌.ಪ್ರಕಾಶ್ , ಹೇಮರಾಜ್, ಪುಟ್ಟರಾಜು ಕುಶಾಲ್ ಹರುವೇಗೌಡ, ರಂಜೀತ್ ಕುಮಾರ್, ಆನಂದ್, ಮಾಧವಹನೂರು, ಪ್ರವೀಣ್ ರಾವ್, ಒಬಳೇಶ್ , ಪವನ್ ಹಾಗೂ ಕಾಂಗ್ರೆಸ್ ಮುಖಂಡರು ಭಾಗವಹಿಸಿದರು.

Related posts