ಒಂದೆಡೆ ಕೊರೋನಾ ಹಾವಳಿಯ ಹೊಡೆತ.. ಇನ್ನೊಂದೆಡೆ ಎಸ್ಸೆಸ್ಸೆಲ್ಸಿ-ಪಿಯುಸಿ ಪರೀಕ್ಷೆ ಹಾಗೂ ಶಾಲಾ ಕಾಲೇಜು ಪುನರಾರಂಭ ಬಗ್ಗೆ ಹರಡುತ್ತಿರುವ ವದಂತಿ ಶಿಕ್ಷಣ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಆ ಕುರಿತು ಆದೇಶ ಹೊರ ಬೀಳುವವರೆಗೂ ಸುದ್ದಿಗೆ ಮಹತ್ವ ಇಲ್ಲ ಎನ್ನುವುದು ಅಧಿಕಾರಿಗಳ ಅಭಿಮತ
ಬೆಂಗಳೂರು: ಕೊರೋನಾ ವೈರಸ್ ಹಾವಳಿ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದೆ. ಈ ಕಾರಣದಿಂದಾಗಿ ಶಾಲಾ ಕಾಲೇಜುಗಳಲ್ಲಿ ಯಾವುದೇ ಚಟುವಟಿಕೆಗಳು ನಡೆಯುತ್ತಿಲ್ಲ. ಅಷ್ಟೇ ಅಲ್ಲ, ಕಳೆದ ಶೈಕ್ಷಣಿಕ ವರ್ಷದ ಕೆಲ ಪರೀಕ್ಷೆಗಳೂ ನಡೆದಿಲ್ಲ.
ಈ ನಡುವೆ, ನೂತನ ವರ್ಷದ ತರಗತಿಗಳು ಆಗಸ್ಟ್ ತಿಂಗಳಲ್ಲಿ ಪ್ರಾರಂಭವಾಗುವುದೇ ಎಂಬ ಪ್ರಶ್ನೆಗಳು ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಏನಿದು ವದಂತಿ?
ಕೊರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷ ಶಾಲಾ-ಕಾಲೇಜುಗಳು ಎಂದಿನಂತೆ ಜೂನ್ ನಲ್ಲಿ ಆರಂಭವಾಗುವುದಿಲ್ಲ, ಆಗಸ್ಟ್ ನಿಂದ ಪ್ರಾರಂಭವಾಗುತ್ತವೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿವೆ. ಅಷ್ಟೇ ಅಲ್ಲ, ಕಳೆದ ಶೈಕ್ಷಣಿಕ ವರ್ಷದಲ್ಲಿ ಪಿಯುಸಿ, ಎಸ್ ಎಸ್ ಎಲ್ ಸಿ ಪರೀಕ್ಷೆ ಪೂರ್ಣಗೊಳ್ಳದಿರುವುದರಿಂದ, ಪರೀಕ್ಷೆ ನಡೆಸದೆ ವಿದ್ಯಾರ್ಥಿಗಳು ಹಿಂದಿನ ಪರೀಕ್ಷೆಗಳಲ್ಲಿ ಪಡೆದ ಅಂಕಗಳನ್ನು ಆಧರಿಸಿ ತೇರ್ಗಡೆ ಮಾಡಲಾಗುತ್ತದೆ ಎಂದು ಕೆಲ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.
ಆದರೆ ಇದು ಸತ್ಯಕ್ಕೆ ದೂರವಾದ ವಿಚಾರ. ಆರೀತಿಯ ವಾವುದೇ ತೀರ್ಮಾನವನ್ನು ಶಿಕ್ಷಣ ಇಲಾಖೆ ಕೈಗೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.
ಈ ರೀತಿಯ ನಿರ್ಧಾರವನ್ನು ಶಿಕ್ಷಣ ಇಲಾಖೆ ಕೈಗೊಂಡಿಲ್ಲ ಎಂದು ಸುರೇಶ್ ಕುಮಾರ್ ಕೂಡಾ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ.. 40 ಹಾಟ್’ಸ್ಪಾಟ್ ಪ್ರದೇಶ: ದೀನಸಿ ಖರೀದಿಗೂ ಅವಕಾಶ ಸಿಗಲ್ಲ