ಶವ ಸಂಸ್ಕಾರ ವಿಚಾರ: ಶಾಸಕ ಭಾರತ್ ಶೆಟ್ಟಿ ಪರ ನಿಂತ ರಾಜೇಶ್ ನಾಯ್ಕ್

ಮಂಗಳೂರು: ಕೊರೋನಾ ಸೋಂಕಿಗೊಳಗಾಗಿ ಮೃತಪಟ್ಟ ಮಹಿಳೆಯ ಅಂತ್ಯಕ್ರಿಯೆ ವಿಚಾರದಲ್ಲಿ ಉಂಟಾಗಿರುವ ಗೊಂದಲ ಬಗ್ಗೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ವಿಚಾರದಲ್ಲಿ ಯಾವ ಶಾಸಕರೂ ತಪ್ಪು ಮಾಡಿಲ್ಲ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕಂಡುಬಂದಿದ್ದು, ಅದಕ್ಕೆ ಶಾಸಕರನ್ನು ದೂಷಿಸುವುದು ಸರಿಯಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಭರತ್ ಶೆಟ್ಟಿಯವರು ಜನಪ್ರತಿನಿಧಿಯಾಗಿ ಜೊತೆಗೆ ಪಕ್ಷ ನಿಷ್ಠರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭರತ್ ಶೆಟ್ಟಿ ಸ್ಪಷ್ಟನೆ

ಇದೇ ವೇಳೆ, ಶವ ಸಂಸ್ಕಾರ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ನನ್ನ ಕ್ಷೇತ್ರದಲ್ಲಿ ಶವ ಸುಡಲು ಬಿಡುವುದಿಲ್ಲ ಎಂದು ತಾವು ಆವಾಜ್ ಹಾಕಿದ್ದಾಗಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಒಟ್ಟಾರೆ ಬೆಳವಣಿಗೆ ಬಗ್ಗೆ ಸ್ಪಷ್ಟನೆ ನೀಡಿರುವ ಭರತ್ ಶೆಟ್ಟಿ, ವೃದ್ಧೆಯ ಅಂತ್ಯಸಂಸ್ಕಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ರವಾನೆಯಾಗಿದ್ದರಿಂದ ಪಚ್ಚನಾಡಿ ಶ್ಮಶಾನದಲ್ಲಿ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಇದರಿಂದ ಕಾನೂನು ತೊಡಕು ಉಂಟಾಗಬಾರದೆಂಬ ಕಾರಣಕ್ಕೆ ಅವರನ್ನು ಸಮಾಧಾನಿಸಿ ಸೂಕ್ತ ಮಾಹಿತಿ ನೀಡಲು ಸ್ಥಳಕ್ಕಹೋಗಿದ್ದೇನೆಯೇ ಹೊರತು ಅಂತ್ಯಸಂಸ್ಕಾರವನ್ನು
ತಡೆಯಲು ಅಲ್ಲ. ಈ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಬೇಸರ ಹೊರಹಾಕಿದ್ದಾರೆ.

ಕೊರೋನಾದಿಂದ ಎದುರಾಗಿರುವ ಈ ಸಂದರ್ಭದಲ್ಲಿ ಯಾವುದೇ ರಾಜಕೀಯ ಮಾಡುವುದು ಸರಿಯಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.
ಇನ್ನೊಂದೆಡೆ,

Related posts