ಬೆಂಗಳೂರು: ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರನ್ನು ವರ್ಗಾವಣೆ ವರ್ಗಾವಣೆ ಮಾಡಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಕಾರ್ಮಿಕ ಇಲಾಖೆಯಿಂದ ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರ, ಅವರಿಗೆ ಬೇರೆ ನಿಯುಕ್ತಿ ಹುದ್ದೆ ತೋರಿಸದಿರುವುದು ಕಾರ್ಮಿಕ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
ಕೋವಿಡ್ ಪರಿಹಾರ ಕಾಯ೯ ಕೈಗೊಳ್ಳುವಲ್ಲಿ ರಾಜ್ಯ ಸಕಾ೯ರದ ವಿವಿಧ ಇಲಾಖೆಗಳಲ್ಲೆ ಪರಿಣಾಮಕಾರಿಯಾಗಿ ಕಾಯ೯ನಿವ೯ಹಿಸಿದ್ದ ಕಾಮಿ೯ಕ ಇಲಾಖೆಯ ಪ್ರಧಾನ ಕಾಯದಶಿ೯ಗಳಾದ ಮಣಿವಣ್ಣನ್ ಅವರನ್ನು ರಾಜ್ಯ ಸಕಾ೯ರವು ವಗಾ೯ವಣೆ ಮಾಡಿರುವುದನ್ನು ತಮ್ಮ ಪಕ್ಷ ಖಂಡಿಸುತ್ತದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ ಹೇಳಿದೆ. .
ಉತ್ತರ ಪ್ರದೇಶ, ಗುಜರಾತ್, ಮಧ್ಯ ಪ್ರದೇಶ ರಾಜ್ಯಗಳಲ್ಲಿ ತಂದಿರುವ ಕಾಮಿ೯ಕ ಕಾನೂನುಗಳಿಂದ ಬಂಡವಾಳಗಾರರಿಗೆ ವಿನಾಯಿತಿ ನೀಡುವ ಕ್ರಮಗಳನ್ನು ಸುಗ್ರೀವಾಜ್ಞೆ ಹೊರಡಿಸುವ ತನ್ನ ಕಾರ್ಯಕ್ಕೆ ಅನುವುಗೊಳಿಸಲು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಹೇಶ್ವರ ರಾವ್ ಅವರಿಗೆ ಕಾಮಿ೯ಕ ಇಲಾಖೆಯ ಪ್ರಧಾನ ಕಾಯ೯ದಶಿ೯ ಹೊಣೆಯನ್ನು ವಹಿಸಿದೆ.
ಇದನ್ನೂ ಓದಿ.. ಖಡಕ್ ಅಧಿಕಾರಿ ವರ್ಗಾವಣೆ; ಒತ್ತಡಕ್ಕೆ ಮಣಿಯಿತೇ ಸರ್ಕಾರ?
ರಾಜ್ಯದ ಕಾಮಿ೯ಕರ ಹಿತಕ್ಕಿಂತ ಕಾಪೋ೯ರೇಟ್ ಬಂಡವಾಳದ ಹಿತವೇ ರಾಜ್ಯ ಸಕಾ೯ರಕ್ಕೆ ಮುಖ್ಯ ವಾಗಿದೆ ಎಂಬುದನ್ನು ಬಿಜೆಪಿ ಮತ್ತೆ ಮತ್ತೆ ಸಾಬೀತು ಮಾಡುತ್ತಿದೆ. ಏನಾದರು ಮಾಡಿ ಕಾಮಿ೯ಕ ಕಾನೂನುಗಳಿಂದ ಬಂಡವಾಳಗಾರರಿಗೆ ವಿನಾಯಿತಿ ನೀಡಲು ಕೋವಿಡ್ ಪರಿಹಾರವನ್ನು ಸಹಾ ಬಲಿಕೊಡಲು ರಾಜ್ಯ ಸಕಾ೯ರ ಹಿಂಜರಿಯದು ಎಂಬುದನ್ನು ಇದು ತೋರುತ್ತದೆ ಎಂದು ಸಿಪಿಐಎಂ ಮುಖಂಡರು ಆರೋಪಿಸಿದ್ದಾರೆ.
ತನ್ನ ಬಂಡವಾಳಗಾರರ ಪರ ನೀಲುಮೆಯ ಸಾಧನೆಗಾಗಿ ಒಬ್ಬ ದಕ್ಷ ಮತ್ತು ಕೋವಿಡ್ ಪರಿಹಾರ ಕಾಯ೯ವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವಲ್ಲಿ ಯಶಸ್ಸು ಕಾಣುತ್ತಿದ್ದ ಅಧಿಕಾರಿಯನ್ನು ಸಹ ಸಹಿಸದು ಬಿಜೆಪಿ ಸರಕಾರ ಎಂದು ಸಿಪಿಐಎಂ ನಾಯಕರು ದೂರಿದ್ದಾರೆ.
ಕೋವಿಡ್ ಲಾಕ್ಡೌನ್ ಸಂತ್ರಸ್ತರಿಗೆ ಪರಿಹಾರವನ್ನು ಪರಿಣಾಮಕಾರಿಯಾಗಿ ಮುಂದುವರಿಸಲು ಶ್ರೀ.ಮಣಿವಣನ್ ವಗಾ೯ವಣೆಯನ್ನು ಕೂಡಲೆ ರದ್ದುಪಡಿಸಿ ಕಾಮಿ೯ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಯಾಗಿ ಅವರನ್ನೇ ಮುಂದುವರಿಸಬೇಕೆಂದು ಸಿಪಿಐಎಂ ಒತ್ತಾಯಿಸಿದೆ.
ಇದನ್ನೂ ಓದಿ ರಾಜ್ಯದ ಖಜಾನೆಗೆ ಹಣದ ಹೊಳೆ; ಮದ್ಯ ಮಾರಾಟದಿಂದ ಬಂದ ಆದಾಯ ಎಷ್ಟು ಗೊತ್ತಾ?