ದೆಹಲಿ: ದೇಶದಲ್ಲಿ ಕೊರೋನಾ ಕೇಸ್ ಹೆಚ್ಚುತ್ತಲೇ ಇವೆ. ಮಹಾರಾಷ್ಟ್ರ, ಕರ್ನಾಟಕ, ಗುಜರಾತ್, ತಮಿಳುನಾಡು ರಾಜ್ಯಗಳಲ್ಲಿ ಸೋಂಕಿನ ಪ್ರಕರಣಗಳು ಅತೀ ಹೆಚ್ಚಿನ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ.
ಮಂಗಳವಾರ ಒಂದೇ ದಿನ ದೇಶದ ವಿವಿಧ ರಾಜ್ಯಗಳಲ್ಲಿ ಬರೋಬ್ಬರಿ 5,611 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1,06,750ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 37,158ಕ್ಕೆ ಹಾಗೂ ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ 12,448ಕ್ಕೇರಿದೆ.
ಸೋಂಕು ಪಾಸಿಟಿವ್ ಪ್ರಕರಣಗಳಷ್ಟೇ ಅಲ್ಲ, ಸಾವಿನ ಪ್ರಕರಣಗಳಲ್ಲೂ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 140 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು, ಈ ಮೂಲಕ ಈ ಸೋಂಕಿಗೆ ಬಲಿಯಾದವರ ಸಂಖ್ಯೆ 3,303ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ.. ದ.ಕ. ಜಿಲ್ಲಾಧಿಕಾರಿ ವಾರ್ಗಾವಣೆಗೆ ಒತ್ತಡ? ಸಂಸದರ, ಶಾಸಕರ ಮೌನದ ಹಿಂದಿನ ಮರ್ಮವೇನು?