ಬೆಂಗಳೂರು: ನಾಡಿನಾದ್ಯಂತ ಇದೀಗ ಮುಸ್ಲಿಮರ ಪವಿತ್ರ ರಂಜಾನ್ ಸಡಗರ. ಲಾಕ್’ಡೌನ್ ಜಾರಿಯಲ್ಲಿರುವುದರಿಂದ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾದ ಅನಿವಾರ್ಯತೆ ಹಿನ್ನೆಲೆಯಲ್ಲಿ ಈ ಬಾರಿ ಸರಳ ಆಚರಣೆಯಷ್ಟೇ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಕೇರಳ ಮಲಬಾರ್ ತೀರದಲ್ಲಿ ಇಂದೇ ಈದ್ ಉಲ್ ಫಿತ್ರ್ ಆಚರಿಸಲಾಗುತ್ತಿದ್ದು, ಇನ್ನುಳಿದೆಡೆ ಸೋಮವಾರ ಈ ಹಬ್ಬವನ್ನು ಆಸಿಗರಿಸಲಾಗುತ್ತಿದೆ.
ಇದೇ ವೇಳೆ, ನಾಡಿನ ಮುಸ್ಲಿಂ ಬಾಂಧವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಶುಭಾಶಯ ಕೋರಿದ್ದಾರೆ.
‘ಮನುಷ್ಯನನ್ನು ಎಲ್ಲಾ ವಿಧವಾದ ದೌರ್ಬಲ್ಯಗಳಿಂದ ಮುಕ್ತಗೊಳಿಸಿ ದೇಹ ಮತ್ತು ಆತ್ಮವನ್ನು ಶುದ್ಧಿಗೊಳಿಸುವ ಪವಿತ್ರ ರಂಜಾನ್ ಹಬ್ಬ ಶುಭ ತರಲಿ ಎಂದು ಅವರು ಸಂದೇಶದಲ್ಲಿ ತಿಳಿಸಿದ್ದಾರೆ.
ರಂಜಾನ್ ಎಂದರೆ ಕೇವಲ ಉಪವಾಸ ಮಾತ್ರವಲ್ಲ. ಅರ್ಹರಿಗೆ, ಅಗತ್ಯವಿರುವವರಿಗೆ ದಾನ, ಧರ್ಮ ಮಾಡಿ ಆ ಮೂಲಕ ಭಗವಂತನನ್ನು ಸಂಪ್ರೀತಗೊಳಿಸುವುದಾಗಿದೆ. ಸದ್ಯ ಜಗತ್ತಿನಲ್ಲಿ ಮಾನವಕುಲಕ್ಕೆ ಎದುರಾಗಿರುವ ದೊಡ್ಡ ಸವಾಲನ್ನು ನಾವೆಲ್ಲರೂ ಒಟ್ಟಾಗಿ ಮೆಟ್ಟಿನಿಲ್ಲಬೇಕಿದೆ. ಭಾರತ ಸರ್ವ ಧರ್ಮಗಳ ಭೂಮಿಯಾಗಿದ್ದು, ದೇಶದಲ್ಲಿ ಎಲ್ಲರೂ ಶಾಂತಿ, ಸೌಹಾರ್ದತೆಯಿಂದ ಬದುಕಲು ಈ ಹಬ್ಬ ವೇದಿಕೆಯಾಗಲಿ’ ಎಂದು ಡಿ.ಕೆ. ಶಿವಕುಮಾರ್ ಅವರು ತಮ್ಮ ಶುಭಾಶಯ ಸಂದೇಶದಲ್ಲಿ ತಿಳಿಸಿದ್ದಾರೆ.
ಇದೇ ವೇಳೆ ಪ್ರದೇಶ ಕಾಂಗ್ರೆಸ್ ಪಕ್ಷ ಕೂಡ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭ ಹಾರೈಸಿದೆ.
ಪ್ರವಾದಿ ಮುಹಮ್ಮದ್(ಸ)ರವರ ಮೇಲೆ ಪವಿತ್ರ ಕುರ್ಆನ್ ಅವತೀರ್ಣಗೊಂಡ ಗೌರವಾರ್ಥ,
ಮನುಷ್ಯನನ್ನು ಸ್ವೇಚ್ಛೆ, ಸ್ವಾರ್ಥ, ಅತ್ಯಾಗ್ರಹಗಳಂತಹ ದೌರ್ಬಲ್ಯಗಳಿಂದ ಮುಕ್ತಗೊಳಿಸಿ ದೇಹ ಮತ್ತು ಆತ್ಮವನ್ನು ಪವಿತ್ರ ಗೊಳಿಸುವ ಉದ್ದೇಶದ,
ಒಂದು ತಿಂಗಳ ಕಠಿಣ ವ್ರತಾಚರಣೆಯ ಬಳಿಕ ಬರುವ ರಂಜಾನ್ ಹಬ್ಬದ ಹಾರ್ದಿಕ ಶುಭಾಷಯಗಳು.#Ramadan #EidMubarak pic.twitter.com/4JK8IrnViG
— Karnataka Congress (@INCKarnataka) May 24, 2020