ಸ್ವಾತಂತ್ರ್ಯವೀರನ ಹೆಸರಿಗೆ ಕಾಂಗ್ರೆಸ್, ಜೆಡಿಎಸ್ ವಿರೋಧ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಯಲಹಂಕದ ಮೇಲ್ಸೇತುವೆಗೆ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ನಾಮಕರಣಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.

34 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ 400 ಮೀಟರ್ ಉದ್ಧದ ಮೇಲ್ಸೇತುವೆಯನ್ನು ನಿರ್ಮಿಸಲಾಗಿದ್ದು, ವೀರ ಸಾರ್ವಕರ್ ಜನ್ಮದಿನವಾದ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಈ ಮೇಲ್ಸೇತುವೆಗೆ ವೀರ ಸಾರ್ವಕರ್ ಅವರ ಹೆಸರಿಡಲು ಸರ್ಕಾರ ತೀರ್ಮಾನಿಸಿತ್ತು. ಆದರೆ ಇದಕ್ಕೆ ವಿರೋಧ ಪಕ್ಷಗಳು ಆಕ್ಷೇಪಿಸಿವೆ.

ಈ ಕುರಿತಂತೆ ಟ್ವೀಟ್ ಮಾಡಿರುವ ವಿಧಾನಪಕ್ಷ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ನಿರ್ಧಾರ ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ‌ ಮಾಡುವ ಅವಮಾನ ಎಂದಿದ್ದಾರೆ.

ಇದೇ ವೇಳೆ ರಾಜ್ಯ ಸರ್ಕಾರದ ನಿರ್ಧಾರ ನಾಡಿನ ಅಭ್ಯುದಯಕ್ಕೆ ಹೋರಾಟ ಮಾಡಿದವರಿಗೆ ಮಾಡುತ್ತಿರುವ ಅಪಮಾನ. ಇದು ರಾಜ್ಯ ಸರ್ಕಾರಕ್ಕೆ ಶೋಭೆ ತರದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

 

Related posts