ಕರಾವಳಿ ಈಗ ಡೇಂಜರ್; ಕ್ವಾರಂಟೈನ್ ಮುಗಿಸಿ ಮನೆ ಸೇರಿದವರಲ್ಲೂ ಸೋಂಕು?

ಉಡುಪಿ: ರಾಜ್ಯದಲ್ಲಿ ಕೊರೋನಾ ವೈರಾಣು ಶರವೇಗದಲ್ಲಿ ಹರಡಿದ್ದು, ದೇವಳ ನಗರಿ ತಲ್ಲಣಗೊಂಡಿದೆ. ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ ದಾಖಲೆ ಎಂಬಂತೆ 200 ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂಬ ಸುದ್ದಿ ಹರಿದಾಡಿ ಆತಂಕ ಸೃಷ್ಟಿಯಾಗಿತ್ತು. ಆದರೆ ಸಂಜೆ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ಉಡುಪಿ ಜಿಲ್ಲೆಯಲ್ಲಿ 150 ಹೊಸ ಪ್ರಕರಣ ದೃಢಪಟ್ಟಿರುವುದಾಗಿ ಸ್ಪಷ್ಟಪಡಿಸಿದೆ.

ಲಾಕ್’ಡೌನ್ ನಂತರ ಮಹಾರಾಷ್ಟ್ರ ರಾಜ್ಯದಿಂದ ಸುಮಾರು 8 ಸಾವಿರ ಜನರು ಉಡುಪಿಗೆ ಆಗಮಿಸಿದ್ದಾರೆ. ಈ ಪೈಕಿ 5 ಸಾವಿರ ಜನರನ್ನು ಪರೀಕ್ಷೆಗೊಳಪಡಿಸಲಾಗಿದೆ. ಇವರಲ್ಲಿ ಅನೇಕರಲ್ಲಿ ಸೋಂಕು ಪತ್ತೆಯಾಗಿದ್ದು ಇಂದು ಒಂದೇ ದಿನ 150 ಮಂದಿಯ ಪರೀಕ್ಷಾ ವರದಿ ಪಾಸಿಟಿವ್ ಎಂದು ದೃಢಪಟ್ಟಿದೆ.

ಈ ನಡುವೆ ಸಾಂಸ್ಥಿಕ ಕ್ವಾರಂಟೈನ್ ಮುಗಿಸಿ ಮನೆಗಳಿಗೆ ಹೋಗಿದ್ದ ಅನೇಕರಲ್ಲಿ ಸೋಂಕು ದೃಢಪಟ್ಟಿದ್ದು ಅವರ ಮೂಲಕ ಮತ್ತಷ್ಟು ಮಂದಿಗೆ ಸೋಂಕು ಹರಡಿರಬಹುದೇ ಎಂಬ ಆತಂಕವೂ ಕಾಡತೊಡಗಿದೆ. ಈ ಹಿನ್ನೆಲೆಯಲ್ಲಿ ಅವರ ಸಂಪರ್ಕಿತರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ.. ಸಂಶೋಧಕರ ಯಶೋಗಾಥೆ; ಕಿಲ್ಲರ್ ಕೊರೋನಾಗೆ ಔಷಧಿ ಸಿದ್ದ 

 

Related posts