ದೆಹಲಿ: ರೈತರು ಈಗ ಸರಕುಗಳನ್ನು ತಮ್ಮ ಇಚ್ಛೆಯಂತೆ ರಫ್ತು ಮಾಡಬಹುದು ಅಥವಾ ಸಂಗ್ರಹಿಸಬಹುದು. ಈ ವ್ಯವಸ್ಥೆಗೆ ಅನುಕೂಲವಾಗುವ ರೀತಿ ನಿಯಮ ಪರಿವರ್ತನೆಗೆ ಕೇಂದ್ರ ಸರ್ಕಾರ ಒಪ್ಪಿದೆ.
ಅವಶ್ಯಕ ವಸ್ತುಗಳ ಕಾಯ್ದೆಗೆ ಐತಿಹಾಸಿಕ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು ಇದರಿಂದ ರೈತರಿಗೆ ಅನುಕೂಲವಾಗಲಿದೆ. ಈ ಕುರಿತಂತೆ ವಿವರ ನೀಡಿರುವ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್, ಈ ಕಾಯ್ದೆ ಮೂಲಕ ಕೃಷಿ ಉತ್ಪನ್ನ ಮಾರುಕಟ್ಟೆ ಕ್ಷೇತ್ರದ ಪ್ರಭಾವಿಗಳ ಹಿಡಿತದಿಂದ ರೈತರು ಮುಕ್ತರಾಗಿದ್ದಾರೆ ಎಂದು ಜಾವಡೇಕರ್ ಹೇಳಿದ್ದಾರೆ.