ಕೋವಿಡ್-19 ಸೋಂಕಿನ ಸಂಖ್ಯೆ ಹೆಚ್ಚುತ್ತಲೇ ಇವೆ. ಕರ್ನಾಟಕದಲ್ಲಿ ಮಂಗಳವಾರ ಮತ್ತೆ 317 ಹೊಸ ಪ್ರಕರಣಗಳು ವರದಿಯಾಗಿದ್ದು ಕರುನಾಡಿನ ಜನರಲ್ಲಿ ಆತಂಕ ಹೆಚ್ಚಿದೆ.
ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್ ಈ ಕುರಿತಂತೆ ಮಾಹಿತಿ ಬಹಿರಂಗಪಡಿಸಿದ್ದು, ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕಿತರ ಸಂಖ್ಯೆ 7530ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ. ರಾಜ್ಯದಲ್ಲಿ ಸೋಮವಾರ ಹಾಗೂ ಮಂಗಳವಾರ ನಡುವೆ 7 ಸೋಂಕಿತರು ಮೃತಪಟ್ಟಿದ್ದು, ವೈರಸ್ ಗೆ ಬಲಿಯಾದವರ ಸಂಖ್ಯೆ 94ಕ್ಕೆ ಏರಿಕೆಯಾಗಿದೆ ಎಂಬ ಮಾಹಿತಿಯನ್ನು ಆರೋಗ್ಯ ಇಲಾಖೆ ನೀಡಿದೆ.
ಸಂಜೆಯ ಪತ್ರಿಕಾ ಪ್ರಕಟಣೆ 16/06/2020.
ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಕೆಳಗೆ ಈ ಲಿಂಕನ್ನು ಕ್ಲಿಕ್ ಮಾಡಿ.https://t.co/xpXIW0ToKf@BMTC_BENGALURU @NammaBESCOM @tv9kannada @publictvnews @suvarnanewstv @timesofindia @prajavani @udayavani_web @TV5kannada @Vijaykarnataka @VVani4U pic.twitter.com/SgzR3baR5O— K'taka Health Dept (@DHFWKA) June 16, 2020