ಮಂಗಳೂರು: ಮಂಗಳೂರು ಹೊರವಲಯದ ಗುರುಪುರ ಬಳಿ ಬಾಂಗ್ಲಗುಡ್ಡ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಭಾನುವಾರ ಮಧ್ಯಾಹ್ನ ಈ ದುರಂತ ಸಂಭವಿಸಿದ್ದು ಗುಡ್ಡ ಕುಸಿತ ಪ್ರಕರಣದಲ್ಲಿ ಮಣ್ಣಿನ ಅಡಿಯಲ್ಲಿ ಸಿಲುಕಿದ್ದ ಬಾಲಕರಿಬ್ಬರನ್ನು ಸುದೀರ್ಘ ಕಾರ್ಯಾಚರಣೆ ನಂತರ ಪತ್ತೆ ಮಾಡಲಾಗಿತ್ತು. ಆದರೆ ಬಾಲಕರ ಜೀವ ಉಳಿಸಲು ಸಾಧ್ಯವಾಗಿಲ್ಲ.
ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ ಬಾಲಕರ ಕುಟುಂಬದವರಿಗೆ ಸರ್ಕಾರ ತಲಾ 5 ಲಕ್ಷ ರೂ ಪರಿಹಾರ ಪ್ರಕಟಿಸಿದೆ.
ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದು, ಮೃತರ ಕುಟುಂಬಕ್ಕೆ ತಲಾ 5ಲಕ್ಷ ರೂ. ಪರಿಹಾರ ನೀಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಮಂಗಳೂರಿನ ಗುರುಪುರದಲ್ಲಿ ಗುಡ್ಡಕುಸಿದು, ದುರಂತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಅಪಾರ ನೋವು ತಂದಿದೆ. ಇಂತಹ ಘಟನೆ ನಡೆಯಬಾರದಿತ್ತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತಾ,ಕುಟುಂಬಸ್ಥರಿಗೆ ದುಃಖ ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಕ್ಕೆ ತಲಾ 5ಲಕ್ಷ ರೂ. ಪರಿಹಾರ ನೀಡಲು ಸೂಚಿಸಲಾಗಿದೆ.
— B.S.Yediyurappa (Modi Ka Parivar) (@BSYBJP) July 5, 2020