ಬೆಳಗಾವಿ ಜಿಲ್ಲೆಯಲ್ಲೂ ಕೊರಾನಾ ಸವಾಲು; ಗೋಕಾಕ್ ಮತ್ತು ಮೂಡಲಗಿ ತಾಲೂಕಿನಲ್ಲಿ ಲಾಕ್’ಡೌನ್

ಬೆಳಗಾವಿ: ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿರುವ ಕೊರೋನಾ ವೈರಸ್ ಹಾವಳಿಯಿಂದ ಬೆಳಗಾವಿ ಜಿಲ್ಲೆಯೂ ತತ್ತರಿಸಿದೆ. ಕೊರೋನಾ ಸೋಂಕು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಗೋಕಾಕ್ ಮತ್ತು ಮೂಡಲಗಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಮುಂದಿನ 8 ದಿನಗಳ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಗೋಕಾಕ್ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಾತನಾಡಿದ ಸಚಿವರು, ಸೋಮವಾರ ರಾತ್ರಿಯಿಂದ ಮುಂದಿನ 8 ದಿನಗಳ ಕಾಲ ಸ್ವಯಂಪ್ರೇರಿತ ಲಾಕ್ ಡೌನ್ ನಡೆಯಲಿದೆ ಎಂದು ತಿಳಿಸಿದರು.

ಜೀವ ಇದ್ದರೆ ಮಾತ್ರ ಜೀವನ. ಹಾಗಾಗಿ ಈ ಕೊರೋನಾ ಸೋಂಕು ನಿವಾರಿಸಲು ಅನಿವಾರ್ಯವಾಗಿ ಲಾಕ್ ಡೌನ್ ಘೋಷಿಸಬೇಕಾಗಿದೆ. ತಾಲ್ಲೂಕಿನ ಎಲ್ಲಾ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಲಹೆ ಪಡೆಯಲಾಗಿದೆ ಎಂದ ಸಚಿವರು, ಈ ಲಾಕ್’ಡೌನ್ ವಿಚಾರದಲ್ಲಿ ಜನರು ಸಹಕರಿಸಬೇಕೆಂದು ಮನವಿ ಮಾಡಿದರು.

Related posts