ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿನ ಪ್ರಮಾಣ ಮತ್ತಷ್ಟು ಹೆಚ್ಚಳವಾಗಿದೆ. ಸೋಂಕು ಅಷ್ಟೇ ಅಲ್ಲ ಮರಣ ಪ್ರಮಾಣವೂ ಹೆಚ್ಚಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಆತಂಕಕಾರಿ ಸಂಗತಿಯನ್ನು ಬಹಿರಂಗಪಡಿಸಿದೆ. ಬುಧವಾರ ಒಂದೇ ದಿನ ಬರೋಬ್ಬರಿ 87 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, ರಾಜ್ಯದಲ್ಲಿ 3176 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 47,253ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1975 ಪ್ರಕರಣಗಳು ವರದಿಯಾಗಿದ್ದು, ಧಾರವಾಡ ಜಿಲ್ಲೆಯಲ್ಲಿ 139, ಬಳ್ಳಾರಿ 136, ಮೈಸೂರು ಜಿಲ್ಲೆಯಲ್ಲಿ 99, ವಿಜಯಪುರದಲ್ಲಿ 80, ದಕ್ಷಿಣಕನ್ನಡದಲ್ಲಿ 86, ಕಲಬುರಗಿಯಲ್ಲಿ 67, ಉಡುಪಿ ಜಿಲ್ಲೆಯಲ್ಲಿ 52 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಹೆಲ್ತ್ ಬುಲೆಟಿನ್ ಹೇಳಿದೆ. ಇದೇ ವೇಳೆ, ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 929ಕ್ಕೆ ಏರಿಕೆಯಾಗಿದೆ.
ಇಂದಿನ ಪತ್ರಿಕಾ ಪ್ರಕಟಣೆ 15/07/2020.
ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಕೆಳಗೆ ಈ ಲಿಂಕನ್ನು ಕ್ಲಿಕ್ ಮಾಡಿ.https://t.co/oBtH5R5fau@BMTC_BENGALURU @NammaBESCOM @tv9kannada @publictvnews @suvarnanewstv @timesofindia @prajavani @udayavani_web @TV5kannada @Vijaykarnataka @VVani4U pic.twitter.com/ngm7QdiRmx— K'taka Health Dept (@DHFWKA) July 15, 2020