ಕೊರೋನಾ ವಿಚಾರ; ಕಣ್ಣಾಮುಚ್ಚಾಳೆಯಾಡುವ ಆಸ್ಪತ್ರೆಗಳಿಗೆ ಸರ್ಕಾರದ ಕಾನೂನು ಪ್ರಹಾರ

ಬೆಂಗಳೂರು: ಕೊರೋನಾ ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳ ಕಣ್ಣಾಮುಚ್ಚಾಲೆ ಆಟ ನೇಯುತ್ತಿದೆಯಾ? ರಾಜ್ಯ ಸರ್ಕಾರದ ನಿಯಮದ ಪ್ರಕಾರ ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ 50ರಷ್ಟು ಹಾಸಿಗೆಗಳನ್ನು ಕೋವಿಡ್-19 ಸೋಂಕಿತರ ಚಿಕಿತ್ಸೆಗೆ ಮೀಸಲಿಡಬೇಕು. ಆದರೆ ಕೆಲವು ಆಸ್ಪತ್ರೆಗಳು ಈ ನಿಯಮವನ್ನು ಪಾಲಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.

ಇದರಿಂದ ಕೆಂಡಾಮಂಡಲವಾಗಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ. ಹೀಗಿದ್ದರೂ ನಿಯಮ ಪಾಲಿಸದ ಆಸ್ಪತ್ರೆ ವಿರುದ್ಧ ಸರ್ಕಾರ ಕಾನೂನು ಪ್ರಹಾರ ಮಾಡಿದೆ.

ರಾಜ್ಯ ಸರ್ಕಾರ ಬೆಂಗಳೂರಿನ ಮಾರತ್ ಹಳ್ಳಿಯ ಸಾಕ್ರ ಖಾಸಗಿ ಆಸ್ಪತ್ರೆ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ. ಆಸ್ಪತ್ರೆಯ ಮೂವರು ಮುಖ್ಯಸ್ಥರನ್ನು ಆರೋಪಿಗಳಾಗಿ ಹೊಣೆ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಟ್ವೀಟ್ ಮಾಡಿದ್ದಾರೆ.

Related posts