ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನಿಂದಾಗಿ ಮತ್ತೆ 98 ಮಂದಿ ಸಾವಿಗೀಡಾಗಿದ್ದಾರೆ. ಶನಿವಾರ 5,172 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, 98 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ವಾರ ಸಂಖ್ಯೆ 2,412 ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರದಲ್ಲಿ ಶನಿವಾರ 1,852 ಹೊಸ ಪ್ರಕರಣಗಳು ವರದಿಯಾಗಿದ್ದು, 27 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.
ಮೈಸೂರಿನಲ್ಲಿ 65, ಬಳ್ಳಾರಿಯಲ್ಲಿ 269, ಕಲಬುರಗಿಯಲ್ಲಿ 219, ಬೆಳಗಾವಿ 219, ಧಾರವಾಡ 184, ಹಾಸನ 146, ದಕ್ಷಿಣಕನ್ನಡ 139, ಉಡುಪಿ 136, ಬಾಗಲಕೋಟೆ 134, ವಿಜಯಪುರ 129, ಶಿವಮೊಗ್ಗ 119, ರಾಯಚೂರು 109, ದಾವಣಗೆರೆ 108, ಕೊಪ್ಪಳ ಜಿಲ್ಲೆಯಲ್ಲಿ 107 ಹೊಸ ಪಾಸಿಟಿವ್ ಕೇಸ್’ಗಳು ವರದಿಯಾಗಿವೆ.
ಇಂದಿನ 01/08/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @sriramulubjp @drashwathcn @BSBommai @mla_sudhakar @iaspankajpandey @Tejasvi_Surya @BBMP_MAYOR @BBMPCOMMhttps://t.co/NMdKjMZLSp pic.twitter.com/dZIyHF6V02
— K'taka Health Dept (@DHFWKA) August 1, 2020
ಇದೆ ವೇಳೆ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಳವಾಗಿದೆ. ಆತ್ಮಸ್ಥೈರ್ಯ ಇದ್ದಾರೆ ಕೊರೋನಾ ವಿರುದ್ಧ ಖಂಡಿತ ಜಯ ಸಾಧಿಸಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಟ್ವೀಟ್ ಮಾಡಿ ಅಭಿಪ್ರಯ ಹಂಚಿಕೊಂಡಿದ್ದಾರೆ.
https://twitter.com/mla_sudhakar/status/1289572249993744384/photo/1