ಮದುವೆಯ ತಯಾರಿಯಲ್ಲಿ ಅಂಬಿ ಪುತ್ರ; ಪ್ರಧಾನಿಗೆ ಆಮಂತ್ರಣ

ಬೆಂಗಳೂರು: ಕನ್ನಡ ಚಿತ್ರರಂಗದ ದಿಗ್ಗಜ ನಟ ದಿವಂಗತ ಅಂಬರೀಶ್ ಮತ್ತು ಸಂಸದೆ ಸುಮಲತಾ ಪುತ್ರ ಅಭಿಷೇಕ್​ ಅಂಬರೀಶ್​ ಇದೀಗ ಮದುವೆಯ ತಯಾರಿಯ ಸಡಗರದಲ್ಲಿದ್ದಾರೆ.

ಜೂನ್​ ತಿಂಗಳಲ್ಲಿ ಅದ್ಧೂರಿ ಮದುವೆ ಸಮಾರಂಭ ನಡೆಯಲಿದ್ದು, ಗಣ್ಯರಿಗೆ ಆಮಂತ್ರಣ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಈ ನಡುವೆ ಸಂಸದೆ ಸುಮಲತಾ ಅವರು ತಮ್ಮ ಪುತ್ರ ಅಭಿಷೇಕ್ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮದುವೆಯ ಕರೆಯೋಲೆಯನ್ನು ನೀಡಿದ್ದಾರೆ‌.

ಪ್ರಧಾನಿಯವರನ್ನು ಆಮಂತ್ರಿಸಿರುವ ಬಗ್ಗೆ ಟ್ವಿಟ್ಟರ್‌ನಲ್ಲಿ ಪೋಸ್ಟ್ ಹಾಕಿರುವ ಅವರು, ವಿಶ್ವದ ಅತ್ಯಂತ ಜನಪ್ರಿಯ ಮತ್ತು ಗೌರವಾನ್ವಿತ ಹಾಗೂ ದೇಶದ ಪ್ರಗತಿಗಾಗಿ ಸದಾ ಸಮರ್ಪಣಾ ಮನೋಭಾವ ಹೊಂದಿರುವ ನಾಯಕರಿಂದ ಪುತ್ರ ಅಭಿಷೇಕ್ ಅಂಬರೀಶ್ ಅವರು ಆಶೀರ್ವಾದ ಪಡೆಯುವಂತಹ ಸೌಭಾಗ್ಯವನ್ನು ಇಂದು ಪಡೆದರು ಎಂದಿದ್ದಾರೆ.

Related posts